ಕಲಬುರಗಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಶಾಲಾ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಜಿಲ್ಲೆಯಲ್ಲಿಂದು ಒಟ್ಟು 6 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಅಫಜಲಪುರ ತಾಲೂಕಿನ ಮಣ್ಣೂರು ಶಾಲೆಯಲ್ಲಿ ಓರ್ವ ವಿದ್ಯಾರ್ಥಿ, ಕಾಸರಬೋಸಗಾ ಶಾಲೆಯ ಇಬ್ಬರು ಮಕ್ಕಳು, ಸೇಡಂ ಶಾಲೆಯ ಓರ್ವ ವಿದ್ಯಾರ್ಥಿ, ಕಲಬುರಗಿ ಶಾಲೆಯ ಇಬ್ಬರು ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಶಾಲಾ ಮಕ್ಕಳಿಗೆ ಕೋವಿಡ್ ತಗುಲುತ್ತಿದ್ದಂತೆ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.
ಇದನ್ನೂ ಓದಿ: ಪಾದಯಾತ್ರೆ ಕೈ ಬಿಡಲು ಕೋರಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ಪತ್ರ
ಇತ್ತ ಕಲಬುರಗಿಯ ಕೇಂದ್ರೀಯ ವಿವಿಯಲ್ಲೂ ಕೊರೊನಾ ಸ್ಫೋಟಗೊಂಡಿದ್ದು, 45ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ನಿನ್ನೆ ಒಂದೇ ದಿನ ಕಲಬುರಗಿ ಜಿಲ್ಲೆಯಲ್ಲಿ 188 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇಷ್ಟಾದರೂ ಜಿಲ್ಲೆಯ ಜನತೆ ಕೋವಿಡ್ ನಿಯಮ ಪಾಲಿಸುತ್ತಿರುವುದು ಕಂಡುಬರುತ್ತಿಲ್ಲ.