ಕಲಬುರಗಿ: ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇಂದು ಬೆಳಗ್ಗೆಯಿಂದಲೇ ಪೊಲೀಸರು ಫೀಲ್ಡಿಗಿಳಿದಿದ್ದು, ಅನವಶ್ಯಕವಾಗಿ ರಸ್ತೆಗೆ ಇಳಿದವರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.
ನಗರದ ಪಟೇಲ್ ವೃತ್ತ, ರಾಷ್ಟ್ರಪತಿ ಚೌಕ್, ಬಸ್ ನಿಲ್ದಾಣ, ಜಗತ್ ಸರ್ಕಲ್, ಸೂಪರ್ ಮಾರ್ಕೆಟ್ ಸೇರಿ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ನಾಕಾಬಂದಿ ಮಾಡಿದ್ದು, ಪ್ರತಿಯೊಂದು ವಾಹನ ಪರೀಶಿಲನೆ ಮಾಡುತ್ತಿದ್ದಾರೆ.
ಅನವಶ್ಯಕವಾಗಿ ಹೊರ ಬಂದವರ ಬೈಕ್ ಸೀಜ್ ಮಾಡುತ್ತಿದ್ದಾರೆ. ಈಗಾಗಲೇ ಸುಮಾರು 100ಕ್ಕೂ ಹೆಚ್ಚು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಸೂಪರ್ ಮಾರ್ಕೆಟ್ನಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ.
ಓದಿ: ಬೆಂಗಳೂರಿನ ಕೋವಿಡ್ ಪ್ರಕರಣಗಳಲ್ಲಿ ದಿಢೀರ್ ಇಳಿಕೆ..ಇಂದು 15,738 ಜನರಿಗೆ ಪಾಸಿಟಿವ್!