ಕಲಬುರಗಿ: ಇಂದು ನಡೆಯುತ್ತಿರುವ ಟಿ20 ವಿಶ್ವಕಪ್ ಕ್ರಿಕೆಟ್ನಲ್ಲಿ ಭಾರತ ಪಾಕಿಸ್ತಾನ ತಂಡಗಳ ನಡುವೆ ಸೆಣಸಾಟದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಅಭಿಮಾನಿಗಳು ಭಾರತದ ತಂಡ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದರು.
ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಟೀಂ ಇಂಡಿಯಾ ಅಭಿಮಾನಿಗಳು ಕಲಬುರಗಿಯ ಸುಪ್ರಸಿದ್ಧ ಶರಣಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಈಡುಗಾಯಿ ಒಡೆದು ಭಾರತ ಗೆಲ್ಲಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಇಂಡೋ-ಪಾಕ್ ಹೈವೋಲ್ಟೇಜ್ ಪಂದ್ಯ: ಬೆಟ್ಟಿಂಗ್ ಬುಕ್ಕಿಗಳ ಮೇಲೆ ಖಾಕಿ ಹದ್ದಿನ ಕಣ್ಣು