ಕಲಬುರಗಿ: ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನಕ್ಕೆ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಅವರನ್ನು ನೇಮಕಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಹಲವು ದಿನಗಳಿಂದ ಖಾಲಿ ಉಳಿದಿದ್ದ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ಪ್ರಬಲ ಪೈಪೋಟಿ ಏರ್ಪಟ್ಟಿತ್ತು. ಅಲ್ಲದೆ ಸರ್ಕಾರ ಸಚಿವ ಸ್ಥಾನ ಹಂಚಿಕೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ದ್ರೋಹ ಮಾಡಿದೆ ಎಂಬ ಆರೋಪ ಕೇಳಿಬಂದಿದ್ದವು.
![Dattatreya Patil Revour elected KKRDB president](https://etvbharatimages.akamaized.net/etvbharat/prod-images/kn-klb-02-kkrdb-president-announced-ka10021_27072020143209_2707f_1595840529_150.jpg)
ಇದೀಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೆಕೆಆರ್ಡಿಬಿ ಅಧ್ಯಕ್ಷರಾಗಿ ದತ್ತಾತ್ರೇಯ ಪಾಟೀಲ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿ ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ಅವರನ್ನು ಹಾಗೂ ಸುರಪುರ ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರನ್ನು ಕರ್ನಾಟಕ ರಾಜ್ಯ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.
![Dattatreya Patil Revour elected KKRDB president](https://etvbharatimages.akamaized.net/etvbharat/prod-images/kn-klb-02-kkrdb-president-announced-ka10021_27072020143209_2707f_1595840529_734.jpg)
ಕಲ್ಯಾಣ ಕರ್ನಾಟಕ ಘೋಷಣೆ ಬಳಿಕ ಮೊದಲ ಅಧ್ಯಕ್ಷರ ಆಯ್ಕೆ
ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹೈದ್ರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಲಾಯಿತು. ಕಲ್ಯಾಣ ಕರ್ನಾಟಕ ಎಂದು ಘೋಷಿಸಿದ ಬಳಿಕ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನಕ್ಕೆ ಇದುವರೆಗೂ ಯಾರನ್ನು ನೇಮಿಸಿರಲಿಲ್ಲ ಇದೀಗ ಶಾಸಕ ದತ್ತಾತ್ರೇಯ ಪಾಟೀಲ್ ಅವರನ್ನು ನೇಮಿಸಲಾಗಿದೆ.