ETV Bharat / city

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣಗಳಿಲ್ಲ: ಡಿ.ಕೆ ಶಿವಕುಮಾರ್ ಸ್ಪಷ್ಟನೆ - ರಾಹುಲ್​ಗಾಂಧಿ

ಕಾಂಗ್ರೆಸ್​ನಲ್ಲಿ ಯಾವುದೇ ಬಣಗಳಿಲ್ಲ. ನಮ್ಮ ಬಗ್ಗೆ ಬಿಜೆಪಿಯವರಿಗೆ ಮಾತನಾಡದಿದ್ದರೆ ನಿದ್ರೆಯೇ ಬರುವುದಿಲ್ಲ, ಹೀಗಾಗಿ ನಿತ್ಯ ನಮ್ಮ ಬಗ್ಗೆ ಮಾತನಾಡುತ್ತಾರೆ. ಮೊದಲು ಮಳೆಯಿಂದ ತತ್ತರಿಸಿದವರಿಗೆ ಸರ್ಕಾರ ಪರಿಹಾರ ನೀಡಬೇಕು, ಹಣ ಬಿಡುಗಡೆ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

DK Shivakumar reaction about Congress faction
ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್
author img

By

Published : Nov 22, 2021, 11:36 AM IST

Updated : Nov 22, 2021, 11:52 AM IST

ಕಲಬುರಗಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣಗಳಿಲ್ಲ.ಇರೋದು ಒಂದೇ, ಅದು ಸೋನಿಯಾ ಗಾಂಧಿ ಬಣ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (KPCC President DK Shivakumar) ಹೇಳಿದರು.

ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಬಗ್ಗೆ ಬಿಜೆಪಿಯವರಿಗೆ ಮಾತನಾಡದಿದ್ರೆ ನಿದ್ರೆಯೇ ಬರುವುದಿಲ್ಲ. ಹೀಗಾಗಿ, ನಿತ್ಯ ನಮ್ಮ ಬಗ್ಗೆ ಮಾತನಾಡುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್

ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸುತ್ತೇವೆ:

ಇನ್ನೆರಡು ಗಂಟೆಯಲ್ಲಿ ಪರಿಷತ್ ಚುನಾವಣೆಗೆ (Council Election) ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. 20 ಕಡೆ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡುತ್ತಿದ್ದೇವೆ. ಒಂದು ವೇಳೆ ಯಾರಾದ್ರು ಬಂಡಾಯ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ರೆ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುತ್ತೇವೆ. ಎರಡು ಸ್ಥಾನ ಇರೋ ಕಡೆ ಒಬ್ಬರೇ ಅಭ್ಯರ್ಥಿ ಹಾಕ್ತಿದ್ದೇವೆ ಎಂದರು.

ಇದನ್ನೂ ಓದಿ: ಜೆಡಿಎಸ್ ಜತೆ ಮೈತ್ರಿ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿಲ್ಲ: ಸಿಎಂ ಬೊಮ್ಮಾಯಿ

ಉನ್ನತ ಮಟ್ಟದ ತನಿಖೆಯಾಗಲಿ:

ಗುತ್ತಿಗೆದಾರರು ಪ್ರಧಾನಿ ಮೋದಿಗೆ ಪತ್ರ ಬರೆದ ವಿಚಾರದ ಕುರಿತು ಮಾತನಾಡಿದ ಅವರು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ನಾವು ಕೂಡ ನಾಮಪತ್ರ ಸಲ್ಲಿಕೆ ಮುಗಿದ ನಂತರ ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ. ದೇಶದಲ್ಲಿ ಭ್ರಷ್ಟ ಸರ್ಕಾರವಿದ್ದರೆ ಅದು ಕರ್ನಾಟಕ ಸರ್ಕಾರ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: Watch video: ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ತಂದೆ - ಮಗನನ್ನು ಸಿನಿಮೀಯ ರೀತಿಯಲ್ಲಿ ರಕ್ಷಣೆ

Last Updated : Nov 22, 2021, 11:52 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.