ಕಲಬುರಗಿ: ನಗರ ಹೊರವಲಯದ ರಿಂಗ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೇರಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ.
ಇಲ್ಲಿನ ರಾಮಮಂದಿರ ಕಡೆಯಿಂದ ಖರ್ಗೆ ಪೆಟ್ರೋಲ್ ಪಂಪ್ ಕಡೆಗೆ ಈ ಕಾರು ತೆರಳುತಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಾಜಾಪೂರ ರಿಂಗ್ ರೋಡ್ನಲ್ಲಿ ಡಿವೈಡರ್ ಮೇಲೇರಿದೆ.
ಚಾಲಕ ಸೇರಿ ಕಾರಿನಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.