ಕಲಬುರಗಿ: ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳ ವಿರುದ್ಧವೇ ಗ್ರಾಮಸ್ಥರು ತಿರುಗಿಬಿದ್ದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭೀಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಭೀಮನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದರು. ಈ ವೇಳೆ ವಿಚಾರಿಸಲು ಬಂದ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ ಕಾಸಲ್ ಮೇಲೆ ಅಬಕಾರಿ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ಗ್ರಾಮಸ್ಥರು, ಅಧಿಕಾರಿಗಳ ವಾಹನದ ಟೈರ್ ಗಾಳಿ ತೆಗೆದು ಪಂಕ್ಚರ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರಿಗಳು ಮದ್ಯ ಮಾರಾಟ ಪರವಾನಿಗೆ ಇರುವ ಅಮಾಯಕರ ಮೇಲೆ ಸುಳ್ಳು ಕೇಸ್ ದಾಖಲಿಸುತ್ತಿದ್ದಾರೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ಬಳಿ ಲಂಚ ಪಡೆಯುತ್ತಿದ್ದಾರೆ ಎಂದು ಗ್ರಾಮಸ್ಥರು ಗಂಭೀರವಾಗಿ ಆರೋಪ ಮಾಡಿದರು. ಇದರಿಂದಾಗಿ ಕೆಲಕಾಲ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಮಧ್ಯ ಪ್ರದೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ