ETV Bharat / city

ನೇಣಿಗೆ ಶರಣಾಗಿದ್ದ ರೈತನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ - ಕಲ್ಲಂಗಡಿ ಮಾರಾಟ ಮಾಡಲಾಗದೆ ಆತ್ಮಹತ್ಯೆ ಶರಣು

ಲಾಕ್​ಡೌನ್​ ಹಿನ್ನೆಲೆಯಲ್ಲಿ ದೇಶಾದ್ಯಂತ ಸಾರಿಗೆ ಸಂಚಾರ ಬಂದ್​ ಆಗಿದೆ. ಈ ಹಿನ್ನೆಲೆಯಲ್ಲಿ ಕೈಗೆ ಬಂದ ಬೆಳೆಯನ್ನು ಮಾರುಕಟ್ಟೆ ಸಾಗಿಸಲು ಆಗದ ಕಾರಣ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Agriculture Minister B.C. Patil
ಕೃಷಿ ಸಚಿವ ಬಿ.ಸಿ.ಪಾಟೀಲ್​
author img

By

Published : Apr 7, 2020, 7:27 PM IST

ಕಲಬುರಗಿ: ಲಾಕ್​​​ಡೌನ್​​​ನಿಂದ ಕಲ್ಲಂಗಡಿ ಮಾರಾಟ ಮಾಡಲಾಗದೇ ಆತ್ಮಹತ್ಯೆಗೆ ಶರಣಾದ ಆಳಂದ ರೈತನ ಕುಟುಂಬಕ್ಕೆ ಕೃಷಿ ಸಚಿವ ಬಿ‌.ಸಿ.ಪಾಟೀಲ್​​ 5 ಲಕ್ಷ ರೂ. ಪರಿಹಾರ ವಿತರಿಸಿದರು.

ಆಳಂದ ತಾಲೂಕಿನ ಲಾಡ್‌ ಚಿಂಚೋಳಿ ಗ್ರಾಮದ ರೈತ ಚಂದ್ರಕಾಂತ‌ ಬಿರಾದರ್​ ಮೃತ ರೈತ ಎನ್ನಲಾಗಿದೆ. ಬೆಳೆದ‌ ಕಲ್ಲಂಗಡಿಯನ್ನು ಮಾರಾಟಕ್ಕೆ ಸಾಗಣೆ ಮಾಡಲು ಸಾಧ್ಯವಾಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮೃತನ ಮನೆಗೆ ಭೇಟಿ ನೀಡಿದ ಕೃಷಿ ಸಚಿವ ಬಿ‌.ಸಿ.ಪಾಟೀಲ್​ ಸರ್ಕಾರದಿಂದ 5 ಲಕ್ಷ ರೂ. ಪರಿಹಾರದ ಜೊತೆಗೆ ರಾಷ್ಟ್ರೀಯ ಕೌಟುಂಬಿಕ ನೆರವು ಯೋಜನೆಯಡಿ 20 ಸಾವಿರ ರೂಪಾಯಿ ಹಾಗೂ ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ನಗದು ಹಣವನ್ನು ಮೃತನ ಪತ್ನಿಗೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.