ಕಲಬುರಗಿ: ತೀವ್ರ ಬರಗಾಲದ ಹಿನ್ನೆಲೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಜೊತೆಗೆ ಮೋಡ ಬಿತ್ತನೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಳೆದ ವರ್ಷದ ಬೆಳೆ ಹಾನಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
ಕಳೆದ ಎರಡು ವರ್ಷಗಳಿಂದ ಎಲ್ನಿನೋ ಚಂಡಮಾರುತದಿಂದ ರಾಜ್ಯದಲ್ಲಿ ಬರ ಉಂಟಾಗಿದ್ದು, ಈ ವರ್ಷವೂ ಅದೇ ಚಂಡಮಾರುತದಿಂದ ಬರ ಬರುವ ಸಾಧ್ಯತೆಗಳಿವೆ. ಹೀಗಾಗಿ ಮೋಡ ಬಿತ್ತನೆಗೆ ಮುಂದಾಗಬೇಕು. ಬರ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಮಾಡಬೇಕು, ಉದ್ಯೋಗ ಖಾತ್ರಿ ಕೂಲಿ ಹಣ ಕೂಡಲೇ ಬಿಡುಗಡೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.