ಕಲಬುರಗಿ: ಪ್ರಚೋದನಕಾರಿ ಭಾಷಣ, ಕೋಮು ಸೌಹಾರ್ದತೆ ಕದಡುವ ನಿಟ್ಟಿನಲ್ಲಿ ಹೇಳಿಕೆ ನೀಡಿದ ಗಂಭೀರ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಮುಕ್ರಂಖಾನ್ ಮೇಲೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಹಿಜಾಬ್ ವಿರೋಧಿಸುವವರ ವಿರುದ್ಧ ಮುಕ್ರಂಖಾನ್ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಹೀಗಾಗಿ ಕಾಂಗ್ರೆಸ್ ಮುಖಂಡನ ವಿರುದ್ಧ ಐಪಿಸಿ 153,294 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮುಕ್ರಂಖಾನ್ ಹೇಳಿಕೆ ಖಂಡಿಸಿ ಹಿಂದೂಪರ ಸಂಘಟನೆಗಳು ಠಾಣೆಯ ಮುಂದೆ ಪ್ರತಿಭಟನೆ ಮಾಡಿದ್ದವು.
ಇದನ್ನೂ ಓದಿ: ಕಾಂಗ್ರೆಸ್ ಮುಖಂಡನ ಪ್ರಚೋದನಕಾರಿ ಹೇಳಿಕೆಗೆ ಸಿದ್ಧಲಿಂಗ ಶಿವಾಚಾರ್ಯರರು ಕಿಡಿ