ಕಲಬುರಗಿ: ಬಟ್ಟೆ ಅಂಗಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ ನಡೆದು ಬಟ್ಟೆ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಗರದ ಶರಣಬಸವೇಶ್ವರ ದೇವಸ್ಥಾನ ರಸ್ತೆಯ ಗೋವಾ ಹೋಟೆಲ್ ಬಳಿ ನಡೆದಿದೆ.
ಎಮ್ಜಿ ಗ್ಲೋಬಲ್ ಹೆಸರಿನ ಅಂಗಡಿಯಲ್ಲಿ ಅಗ್ನಿ ಅವಘಡ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ನಿಂದಾಗಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಘಟನೆ ನ್ಯೂ ರಾಘವೇಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.