ಕಲಬುರಗಿ: ಕಂಬವೇರಿ ದುರಸ್ತಿ ಮಾಡುವಾಗ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಇಬ್ಬರು ಲೈನ್ಮೆನ್ ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿರುವ ಘಟನೆ ಚಿಂಚೋಳಿ ತಾಲೂಕಿನ ಐನೋಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಜೆಸ್ಕಾಂ ಲೈನ್‌ಮನ್ ಸದ್ದಾಂ ಹಾಗು ಪಠಾಣ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.
ಐನೋಳ್ಳಿ ಗ್ರಾಮಕ್ಕೆ ವಿದ್ಯುತ್ ಲೈನ್ ಹಾಕುವಾಗ ಅವಘಡ ಸಂಭವಿಸಿದೆ ಎನ್ನಲಾಗ್ತಿದೆ. ವಿದ್ಯುತ್ ಶಾಕ್ದಿಂದಾಗಿ ಕಂಬದಲ್ಲಿಯೇ ಶವದಂತೆ ಜೋತುಬಿದ್ದಿದ್ದ ಲೈನ್ಮೆನ್ ಅವರನ್ನು ಸ್ಥಳೀಯರ ಸಹಾಯದಿಂದ ಜೆಸ್ಕಾಂ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಅವಘಡಕ್ಕೆ ಜೆಸ್ಕಾಂ ಅಧಿಕಾರಿ ಮತ್ತು ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಐನೋಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಗ್ರಾಮದ ಪ್ರಮುಖ ರಸ್ತೆ ತಡೆದು ಪ್ರತಿಭಟಿಸಿದ್ದಾರೆ.
ಇದನ್ನೂ ಓದಿ: 3 ಮಕ್ಕಳು ಸೇರಿದಂತೆ ಪತ್ನಿಯನ್ನ ಬರ್ಬರವಾಗಿ ಕೊಂದು ನೇಣಿಗೆ ಶರಣಾದ ಮನೆ ಯಜಮಾನ?