ETV Bharat / city

ಕಲಬುರಗಿ: ಗ್ರಾಮ ಪಂಚಾಯತ್​ ಸದಸ್ಯನ ಬರ್ಬರ ಹತ್ಯೆ - ಕಲಬುರಗಿ ಜಿಲ್ಲೆ ಸುದ್ದಿ

ಕಲಬುರಗಿಯ ಆಳಂದ ತಾಲೂಕಿನ ಕಡಗಂಚಿ ಗ್ರಾಪಂ ಸದಸ್ಯ ಶಿವಲಿಂಗಪ್ಪ ಭೂಶೆಟ್ಟಿ ಅವರನ್ನು ದುಷ್ಕರ್ಮಿಗಳು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

Gram panchayat member murdered
ಗ್ರಾಮ ಪಂಚಾಯಿತಿ ಸದಸ್ಯ ಶಿವಲಿಂಗಪ್ಪ ಭೂಶೆಟ್ಟಿ
author img

By

Published : Nov 3, 2020, 1:03 PM IST

ಕಲಬುರಗಿ: ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಲ್ಲಿನ ಕೈಲಾಶ್​ ನಗರದಲ್ಲಿ ನಡೆದಿದೆ.

ಆಳಂದ ತಾಲೂಕಿನ ಕಡಗಂಚಿ ಗ್ರಾಪಂ ಸದಸ್ಯ ಶಿವಲಿಂಗಪ್ಪ ಭೂಶೆಟ್ಟಿ (53) ಕೊಲೆಯಾದವರು. ಕೈಲಾಶ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅವರು, ಮನೆ ಬಳಿ ನಿಂತಿದ್ದಾಗ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ.

ತೀವ್ರ ರಕ್ತಸ್ರಾವ ಉಂಟಾದ ಪರಿಣಾಮ ಶಿವಲಿಂಗಪ್ಪ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಲೆಗೆ ಕಾರಣ ಇನ್ನೂ ಗೊತ್ತಾಗಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸರು ಅಧಿಕಾರಿಗಳು ಭೇಟಿ ಪರಿಶೀಲನೆ ಮುಂದುವರೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.