ಕಲಬುರಗಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಗೋಲ್ಡ್ ಹಬ್ ಬಳಿಯ ಮುಖ್ಯರಸ್ತೆ ಬಹುತೇಕ ಮುಳುಗಡೆಯಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿತ್ತು. ರಾತ್ರಿಯಡೀ ಆರ್ಭಟಿಸಿದ ಮಳೆಯಿಂದ ಜನರು ಕಂಗಾಲಾಗಿದ್ದಾರೆ.
ವರಣನ ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಭೀಮಾ ನದಿ, ಆಮರ್ಜಾ ಡ್ಯಾಂ, ಮುಲ್ಲಾಮಾರಿ ಡ್ಯಾಂ ಭಾಗದಲ್ಲಿ ಪ್ರವಾಹದ ಆತಂಕ ಶುರುವಾಗಿದೆ. ಪ್ರವಾಹ ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ.
ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಮಳೆ ನೀರು ನದಿಯಂತೆ ಹರಿಯುತ್ತಿದ್ದು, ಮನೆಗಳು ಹಾಗೂ ದೇವಸ್ಥಾನಗಳಿಗೆ ನೀರು ನುಗ್ಗಿದೆ. ಒಟ್ಟಾರೆ ಹವಾಮಾನ ಇಲಾಖೆಯ ಸೂಚನೆಯಂತೆ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು, ಇನ್ನು ಒಂದು ವಾರ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಸುಮಲತಾ ಬಗ್ಗೆ ಕುಮಾರಸ್ವಾಮಿ ಈ ಕೃತ್ಯಕ್ಕೂ ಇಳಿದಿದ್ರಾ?: ರಾಕ್‌ಲೈನ್ ವೆಂಕಟೇಶ್ರಿಂದ ಗಂಭೀರ ಆರೋಪ