ಕಲಬುರಗಿ : ಗೃಹಿಣಿಯೊಬ್ಬಳು ಮನೆಯಲ್ಲಿನ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಬ್ಯಾಂಕ್ ಕಾಲೋನಿಯಲ್ಲಿ ನಡೆದಿದೆ.
ರಚಿತಾ ಈರಣ್ಣಾ (21) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಲಬುರಗಿ ನಿವಾಸಿ ಸಿವಿಲ್ ಇಂಜಿನಿಯರ್ ಆಗಿರುವ ಈರಣ್ಣಾ ಜೊತೆ ಕಳೆದ ಮೂರು ವರ್ಷಗಳ ಹಿಂದೆ ಮೂಲತಃ ವಿಜಯಪುರ ನಗರದ ರಚಿತಾ ಇವರ ಮದುವೆಯಾಗಿತ್ತು. ದಂಪತಿಗೆ ಒಂದು ವರ್ಷದ ಹೆಣ್ಣು ಮಗು ಇದೆ.
"ಇದು ಆತ್ಮಹತ್ಯೆಯಲ್ಲ. ತಮ್ಮ ಮಗಳನ್ನು ಹೊಡೆದು ಕೊಲೆ ಮಾಡಿ, ನಂತರ ಆತ್ಮಹತ್ಯೆ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ. ಆಕೆಯ ಮೂಗಿನಲ್ಲಿ ರಕ್ತ ಬಂದಿದೆ.
ದೇಹದ ಮೇಲೆ ಹಲ್ಲೆಯ ಗುರುತುಗಳಿವೆ. ಇದನ್ನು ನೋಡಿದರೆ ಆತ್ಮಹತ್ಯೆಯಲ್ಲ ಕೊಲೆ ಅನ್ನೋದು ಸ್ಪಷ್ಟವಾಗಿ ಗೊತ್ತಾಗುತ್ತಿದೆ." ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.
ತವರಿನಿಂದ ಹಣ ತರುವಂತೆ ಪತಿ ಈರಣ್ಣಾ ಪೀಡಿಸುತ್ತಿದ್ದ. ಸದ್ಯ ಲಾಕ್‌ಡೌನ್ ಇದೆ ನಂತರ ಬಂದು ಮಾತನಾಡುವುದಾಗಿ ಹೇಳಿದ್ದೆವು. ಈ ನಡುವೆ ನಮ್ಮ ಮಗಳನ್ನು ಕೊಲೆ ಮಾಡಿದ್ದಾರೆ. ಪೊಲೀಸರು ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಪೋಷಕರು ಆಗ್ರಹಿಸಿದ್ದಾರೆ. ಈ ಕುರಿತು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ: ನಾಳೆಯಿಂದ ರಾಜ್ಯಾದ್ಯಂತ 10 ಸಾವಿರ ಕ್ರೀಡಾಪಟುಗಳಿಗೆ ಉಚಿತ ಕೋವಿಡ್ ಲಸಿಕೆ