ETV Bharat / city

ನಾನು ಸಚಿವ ಸ್ಥಾನ, ಡಿಸಿಎಂ ಹುದ್ದೆಗೆ ಆಕಾಂಕ್ಷಿಯಾಗಿರಲಿಲ್ಲ: ಬಿ.ವೈ ವಿಜಯೇಂದ್ರ

ಮುಂಬರುವ ದಿನಗಳಲ್ಲಿ ಕಲಬುರಗಿ ಜಿಲ್ಲೆಗೆ ಸಚಿವ ಸ್ಥಾನ ಸಿಗಬಹುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

author img

By

Published : Aug 12, 2021, 4:00 PM IST

B.Y Vijayendra
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ

ಕಲಬುರಗಿ: ನಾನು ಸಚಿವ ಸ್ಥಾನ ಅಥವಾ ಡಿಸಿಎಂ ಹುದ್ದೆಗೆ ಆಕಾಂಕ್ಷಿಯಾಗಿರಲಿಲ್ಲ. ಪ್ರಾಮಾಣಿಕವಾಗಿ ಹೇಳುತ್ತೇನೆ. ನಮ್ಮ ತಂದೆ ನನ್ನ ಸಲುವಾಗಿ ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತೆ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷ 5 ವರ್ಷ ಆಡಳಿತ ಪೂರ್ಣಗೊಳಿಸಲಿದೆ. ಕಲಬುರಗಿ ಜಿಲ್ಲೆಗೆ ಪ್ರಾತಿನಿಧ್ಯ ಸಿಗಬೇಕಿತ್ತು. ಇದು ನನಗೂ ಸೇರಿದಂತೆ ಎಲ್ಲರಿಗೂ ನೋವು ತಂದಿದೆ. ಇನ್ನೂ ನಾಲ್ಕು ಸಚಿವ ಸ್ಥಾನ ಖಾಲಿಯಿವೆ. ಕಲಬುರಗಿ ಜಿಲ್ಲೆಗೆ ಸೂಕ್ತ ಸ್ಥಾನಮಾನ ಸಿಗುವ ವಿಶ್ವಾಸವಿದೆ‌. ನಾನು ಕಲಬುರಗಿ ಜಿಲ್ಲೆಯ ಅಳಿಯನಾಗಿದ್ದು, ಜಿಲ್ಲೆಗೆ ಸಚಿವ ಸ್ಥಾನ ಸಿಗದಿರುವುದು ನನಗೂ ವೈಯುಕ್ತಿಕವಾಗಿ ಬೇಸರ ತಂದಿದೆ. ಮುಂಬರುವ ದಿನಗಳಲ್ಲಿ ಸಿಎಂ ಅವರೊಂದಿಗೆ ಚರ್ಚಿಸಿ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಲಾಗುವುದು ಎಂದರು.

ಆನಂದ್ ಸಿಂಗ್ ಬಗ್ಗೆ ಪಕ್ಷಕ್ಕೆ ಗೌರವವಿದೆ‌:

ಪಕ್ಷ ತ್ಯಜಿಸಿ ಬಂದವರಲ್ಲಿ ಆನಂದ ಸಿಂಗ್ ಮೊದಲ ವ್ಯಕ್ತಿ. ಖಾತೆ ಹಂಚಿಕೆ ಬಗ್ಗೆ ಬೇಸರಗೊಂಡಿದ್ದಾರೆ. ಸಂಪುಟದಲ್ಲಿರುವ ಸಣ್ಣ ಪುಟ್ಟ ಸಮಸ್ಯೆಗಳನು ಸಿಎಂ ಬೊಮ್ಮಾಯಿ ಬಗೆಹರಿಸುತ್ತಾರೆ. ಆನಂದ್ ಸಿಂಗ್ ಸೇರಿದಂತೆ 17 ಜನ ಕಾಂಗ್ರೆಸ್, ಜೆಡಿಎಸ್ ತ್ಯಜಿಸಿ ಬಂದಿದ್ದಾರೆ. ಅವರ ಬಗ್ಗೆ ಸರ್ಕಾರಕ್ಕೆ ಹಾಗೂ ಯಡಿಯೂರಪ್ಪಗೆ ಗೌರವವಿದೆ. ಅವರನ್ನ ಗೌರವಯುತವಾಗಿ ನಡೆಸಿಕೊಂಡು ಹೋಗಲಾಗುವುದು ಎಂದರು.

ಮಂತ್ರಿ, ಉಪಮುಖ್ಯಮಂತ್ರಿಯಾಗುವ ಆಸೆ ನನಗಿಲ್ಲ:

ಸದ್ಯ ನಾನು ರಾಜ್ಯದ ಭಾಜಪದ ಉಪಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಹುದ್ದೆಯನ್ನ ಹುಡುಕಿಕೊಂಡು ಹೋಗುವುದಿಲ್ಲ. ನನ್ನ ತಂದೆ ಯಡಿಯೂರಪ್ಪ ರಾಜ್ಯದಲ್ಲಿ ಸೈಕಲ್ ಮೇಲೆ ಓಡಾಡಿ ಪಕ್ಷ ಕಟ್ಟಿದ್ದಾರೆ. ರಾಜ್ಯದ ಜನ ಅವರ ಹೋರಾಟ ಗುರುತಿಸಿ ಪಕ್ಷಕ್ಕೆ ಅಧಿಕಾರ ಕೊಟ್ಟಿದ್ದಾರೆ. ಪಕ್ಷದ ವರಿಷ್ಠರು ಯಾವುದೇ ಸ್ಥಾನಮಾನ ಕೊಟ್ಟರೂ ಅದನ್ನ ಯಶಸ್ವಿಯಾಗಿ ನಿಭಾಯಿಸಿಕೊಂಡು ಹೋಗುತ್ತೇನೆ.

ನಾನು ಸಚಿವ ಸ್ಥಾನ ಅಥಾವ ಡಿಸಿಎಂ ಹುದ್ದೆಗೆ ಆಕಾಂಕ್ಷಿಯಾಗಿರಲಿಲ್ಲ. ನನಗಿನ್ನೂ 35 ವರ್ಷ. ನಾನು ಸಾಕಷ್ಟು ಬೆಳೆಯಬೇಕಾಗಿದೆ. ಪಕ್ಷವನ್ನ ತಳಮಟ್ಟದಿಂದ ಬೆಳೆಸಬೇಕಾಗಿದೆ. ಮುಂದಿನ ದಿನಗಳಲ್ಲಿ ಪಕ್ಷ ಯಾವ ಜವಾಬ್ದಾರಿ ನೀಡಿದರೂ ನಿಭಾಯಿಸುವೆ ಎಂದರು.

ಒಂದಾಗಿ ಪಾಲಿಕೆ, ಜಿ.ಪಂ ಚುನಾವಣೆ ಎದುರಿಸೋಣ:

ಪಾಲಿಕೆ ಚುನಾವಣೆ ಕುರಿತು ಮಾತನಾಡಿದ ವಿಜಯೇಂದ್ರ, ನಿನ್ನೆಯಷ್ಟೆ ಬೆಳಗಾವಿ, ಕಲಬುರಗಿ ಹಾಗು ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಘೋಷಣೆಯಾಗಿದೆ. ಪ್ರತಿಯೊಂದು ವಾರ್ಡ್‌ನಲ್ಲಿ ಸೂಕ್ತ ಅಭ್ಯರ್ಥಿಯನ್ನ ಆಯ್ಕೆ ಮಾಡಿ ಎಲ್ಲರೂ ಒಂದಾಗಿ ಎಲ್ಲೆಡೆ ಕಮಲ ಅರಳಿಸಲಾಗುವುದು.

ಈ ಚುನಾವಣೆ ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದೆ. ಬರುವಂತಹ ಸಿಂದಗಿ, ಹಾನಗಲ್ ಉಪಚುನಾಣೆಯಲ್ಲಿ ಭಾಜಪ ಯಶಸ್ವಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: 2ಎ ಮೀಸಲಾತಿಗಾಗಿ ಪಂಚಮಸಾಲಿ 'ಮಾಡು ಇಲ್ಲವೇ ಮಡಿ' ಹೋರಾಟ.. 'ಪಂಚ' ನಿರ್ಣಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.