ETV Bharat / city

ಡಿಸಿಎಂ ಹುದ್ದೆಗೆ ನಾನು ಪಟ್ಟು ಹಿಡಿದಿಲ್ಲ: ಶ್ರೀರಾಮುಲು ಸ್ಪಷ್ಟನೆ - ವೈದ್ಯಕೀಯ ಶಿಕ್ಷಣ ಸಚಿವ ಶ್ರೀರಾಮುಲು ನ್ಯೂಸ್​

ಡಿಸಿಎಂ ಹುದ್ದೆಗೆ ನಾನು ಪಟ್ಟು ಹಿಡಿದಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

Sri ramulu
ಶ್ರೀರಾಮುಲು
author img

By

Published : Jan 30, 2020, 3:03 PM IST

Updated : Jan 30, 2020, 4:51 PM IST

ಕಲಬುರಗಿ: ಡಿಸಿಎಂ ಹುದ್ದೆಗೆ ನಾನು ಪಟ್ಟು ಹಿಡಿದಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀರಾಮುಲು, ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ. ಡಿಸಿಎಂ ಪಟ್ಟ ಬೇಕೆಂದು ನಾನು ಪಟ್ಟು ಹಿಡಿದಿಲ್ಲ. ವಾಲ್ಮೀಕಿ ಸಮಾಜದ ಸ್ವಾಮೀಜಿಗಳು ಮತ್ತು ಸಮಾಜದ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸುತ್ತಿದ್ದಾರೆ. ಅವರು ಅಭಿಮಾನದಿಂದ ಅಭಿಯಾನ ನಡೆಸುತ್ತಿರಬಹುದು. ಆದರೆ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾನು ಬದ್ಧ ಎಂದು ತಿಳಿಸಿದರು. ಇನ್ನು ಇದೇ ವೇಳೆ ರಮೇಶ್ ಜಾರಕಿಹೊಳಿ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಅವರು ನನ್ನ ಸಹೋದರನಿದ್ದಂತೆ ಎಂದು ಹೇಳಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು

'ಬಿಜೆಪಿ ದ್ವೇಷದ ರಾಜಕಾರಣ ಮಾಡಲ್ಲ':

ಮಾಜಿ ಸಚಿವರಿಗೆ ಸರ್ಕಾರ ಗನ್ ಮ್ಯಾನ್ ವಾಪಾಸ್ ವಿಚಾರ ಕುರಿತು ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ‌ನೀಡಿದ ಅವರು, ಬಿಜೆಪಿ ಯಾವತ್ತು ದ್ವೇಷದ ರಾಜಕಾರಣ ಮಾಡಲ್ಲ, ಎಲ್ಲರನ್ನೂ ಸಮಾನವಾಗಿ ನೋಡೋದು ನಮ್ಮ ಪಕ್ಷ ಎಂದರು. ಇನ್ನು ಸಚಿವ ಸಂಪುಟ ವಿಸ್ತರಣೆ ತಿಂಗಳ ಕೊನೆಗೆ, ಇಲ್ಲ ಫೆಬ್ರವರಿ ಮೊದಲ ವಾರ ನಡೆಯಲಿದೆ ಎಂದು ತಿಳಿಸಿದರು.

Last Updated : Jan 30, 2020, 4:51 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.