ಕಲಬುರಗಿ: ಬಿಸಿಲೂರು ಕಲಬುರಗಿ ಜಿಲ್ಲೆಯ ಜನತೆಗೆ ಇದೀಗ ಕಲುಷಿತ ಜಲ ಕಂಟಕವಾಗ್ತಿದೆ. ಕಳೆದ ಹದಿನೈದು ದಿನಗಳಲ್ಲಿ ಕಲುಷಿತ ನೀರು ಸೇವಿಸಿ 125ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ವಿಷಾಹಾರ ಸೇವಿಸಿ ಕೇರಳದಲ್ಲಿ ಬಾಲಕಿ ಸಾವು; 13 ವಿದ್ಯಾರ್ಥಿಗಳು ಅಸ್ವಸ್ಥ, ಅಂಗಡಿಗೆ ಬೀಗ
ಘಟನೆ ಸಂಭವಿಸುತ್ತಿದ್ದಂತೆ ಎಚ್ಚೆತ್ತ ಆರೋಗ್ಯ ಇಲಾಖೆ, ಸೂಕ್ತ ರೀತಿಯ ಚಿಕಿತ್ಸೆ ನೀಡಲು ಮುಂದಾಗಿದೆ. ಕಲುಷಿತ ನೀರಿನ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ಲ್ಯಾಬ್ಗೆ ಕಳುಹಿಸಿದ್ದಾರೆ. ವಾಟರ್ ಟ್ಯಾಂಕ್ ಸ್ವಚ್ಛಗೊಳಿಸಿ ಶುದ್ಧ ನೀರು ಪುರೈಸುವಂತೆ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯ್ತಿ, ನಗರಸಭೆ, ಜಿಲ್ಲಾ ಪಂಚಾಯತಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕುದಿಸಿ, ಆರಿಸಿದ ಶುದ್ಧ ನೀರು ಕುಡಿಯುವಂತೆ ಗ್ರಾಮ ಪಂಚಾಯತಿಗಳ ಮೂಲಕ ಡಂಗುರ ಸಾರಿ ಇಲಾಖೆ ಜನತೆಯಲ್ಲಿ ಮನವಿ ಮಾಡುತ್ತಿದೆ.