ಕಲಬುರಗಿ: ಶಿಕ್ಷಣ ತಜ್ಞ, ಧಾರ್ಮಿಕ ಹಾಗೂ ಸಾಮಾಜಿಕ ಹಿತ ಚಿಂತಕರು ಹಾಗೂ ವಿಶ್ವ ಹಿಂದು ಪರಿಷತ್ತಿನ ಪ್ರಾಂತೀಯ ಮಾಜಿ ಅಧ್ಯಕ್ಷರಾಗಿದ್ದ ಶರಣಬಸವೇಶ್ವರ ಸಂಸ್ಥಾನದ ಪೂಜ್ಯ ಶ್ರೀ ಬಸವರಾಜಪ್ಪ ಅಪ್ಪ ಲಿಂಗೈಕ್ಯರಾದ್ದಾರೆ.
82 ವಯಸ್ಸಿನ ಬಸವರಾಜಪ್ಪ ಅಪ್ಪ ಅವರು, ಕಳೆದ ಕೆಲವು ದಿನಗಳ ಹಿಂದೆ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ನಗರದ ನಿಷ್ಠಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಅಪ್ಪಾಜಿ ಇಂದು ಇಹಲೋಕ ತ್ಯಜಿಸಿದ್ದಾರೆ.
ವಿಪರ್ಯಾಸವೆಂದರೆ ನಾಲ್ಕು ದಿನಗಳ ಹಿಂದೆಯಷ್ಟೇ ಅವರ ಪತ್ನಿ ನಳಿನಿ ಅವ್ವಾಜೀ ಅವರು ಅನಾರೋಗ್ಯದಿಂದ ಮೃತಪಟ್ಟಿದರು. ಅವರು ಸಾವನಪ್ಪಿದ್ದ ಕೇವಲ ನಾಲ್ಕು ದಿನಗಳಲ್ಲೇ ಅಪ್ಪನವರು ಬಾರದ ಲೋಕಕ್ಕೆ ತೆರಳಿದ್ದು ಕೇವಲ ಕಲಬುರಗಿಗೆ ಮಾತ್ರವಲ್ಲ ಕಲ್ಯಾಣ ಕರ್ನಾಟಕಕ್ಕೆ ತುಂಬಲಾಗದ ನಷ್ಟವಾಗಿದೆ. ಬಸವರಾಜಪ್ಪ ಅಪ್ಪ, ಇಬ್ಬರು ಪುತ್ರರು ಹಾಗೂ ಐವರು ಪುತ್ರಿಯರು, ಬಂಧು ಬಳಗ ಸೇರಿ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಬಸವರಾಜಪ್ಪ ಕೃಷಿ ಹಾಗೂ ದಾರ್ಮಿಕ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅಲ್ಲದೇ, ಸದಾ ಸಮಾಜಮುಖಿ ಕಾರ್ಯಗಳಿಗೆ ಹೆಸರಾಗಿದ್ದರು, ರೈತರ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದರು. ಸದ್ಯ ಅವರ ಅಗಲಿಕೆ ಅಪಾರ ಭಕ್ತ ಸಮೂಹದಲ್ಲಿ ಮೌನ ಆವರಿಸುವಂತೆ ಮಾಡಿದೆ.