ಕಲಬುರಗಿ : ಮತ ಗೌಪ್ಯತೆ ನಿಯಮ ಉಲ್ಲಂಘಿಸಿದ ಆರೋಪದಡಿ ಕಲಬುರಗಿ ಸಂಸದ ಉಮೇಶ್ ಜಾಧವ್ ಅವರ ಮತ ಅಸಿಂಧುಗೊಳಿಸುವಂತೆ ದೂರು ಸಲ್ಲಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.
ಕಲಬುರಗಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಶರಣಪ್ರಕಾಶ ಪಾಟೀಲ್, ಸಂಸದ ಉಮೇಶ್ ಜಾಧವ್ ಅವರಿಗೆ ಮತದಾನದ ಗೌಪ್ಯತೆ ಕಾಪಾಡುವಷ್ಟು ಸಾಮಾನ್ಯ ಜ್ಞಾನವೂ ಇಲ್ಲ. ತಾವು ಮತ ಚಲಾಯಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಮತ ನೀಡಿರುವ ಬಗ್ಗೆ ಪೋಸ್ಟ್ ಮಾಡಿದ್ದಾರೆ.
ಇದು ಸಂವಿಧಾನಕ್ಕೆ ಹಾಗೂ ಅವರನ್ನು ಗೆಲ್ಲಿಸಿದ ಕಲಬುರಗಿ ಜನರಿಗೆ ಮಾಡಿದ ಅಪಮಾನ. ಹೀಗಾಗಿ, ಸಂಸದ ಉಮೇಶ್ ಜಾಧವ್ ಅವರ ಮತವನ್ನು ಅಸಿಂಧುಗೊಳಿಸುವಂತೆ ಒತ್ತಾಯ ಮಾಡಿದ್ದಾರೆ.
ಸಂಸದ ಉಮೇಶ ಜಾಧವ್ ಅವರು ಸಾಮಾಜಿಕ ಜಾಲತಾಣದಲ್ಲಿ ಬಿ ಜಿ ಪಾಟೀಲ್ ಅವರಿಗೆ ಮತ ಚಲಾಯಿಸಿರುವುದಾಗಿ ಪೋಸ್ಟ್ ಮಾಡಿದ್ದರು. ಬಳಿಕ ಎಚ್ಚೆತ್ತು ಆ ಪೋಸ್ಟ್ ಡಿಲೀಟ್ ಮಾಡಿದ್ದಾರೆ.
ಸಂಸದ ಜಾಧವ್ ವಿರುದ್ಧ ಕಾಂಗ್ರೆಸ್ ಜಿಲ್ಲಾ ಸಮಿತಿಯಿಂದ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾವುದು ಎಂದು ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಪ್ರತಿಭಟನೆ: ಸೇವಾ ಭದ್ರತೆಗೆ ಆಗ್ರಹಿಸಿ ಶಾಸಕ ಬಯ್ಯಾಪೂರಗೆ ಮನವಿ