ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತ 9 ಮಂದಿ ಸಾವನ್ನಪ್ಪಿದ್ದು, ಓರ್ವ ಮಹಿಳೆ ಸೇರಿ ಎಂಟು ಪರುಷರು ಕೋವಿಡ್ಗೆ ಬಲಿಯಾಗಿದ್ದಾರೆ.
65 ವರ್ಷದ ಪುರುಷ, 75 ವರ್ಷದ ಪುರುಷ, 70 ವರ್ಷದ ಪುರುಷ, 77 ವರ್ಷದ ಪುರುಷ, 57 ವರ್ಷದ ಪುರುಷ, 52 ವರ್ಷದ ಪುರುಷ, 58 ವರ್ಷದ ಮಹಿಳೆ, 39 ವರ್ಷದ ಪುರುಷ ಹಾಗೂ 65 ವರ್ಷದ ಪುರುಷ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಮೃತರ ಸಂಖ್ಯೆ 154ಗೆ ಏರಿಕೆಯಾಗಿದೆ. ಇಂದು 285 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8122ಕ್ಕೆ ಏರಿಕೆಯಾಗಿದೆ. ಇಂದು 448 ಜನ ಸೋಂಕಿತರ ಡಿಸ್ಚಾರ್ಜ್ ಆಗಿದ್ದು, ಬಿಡುಗಡೆಯಾದವರ ಸಂಖ್ಯೆ 5774 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2194 ಆ್ಯಕ್ಟಿವ್ ಪ್ರಕರಣಗಳಿವೆ.