ಕಲಬುರಗಿ: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಿಪಿಐ ಕಚೇರಿ ಮೇಲಿನ ದಾಳಿ ಖಂಡಿಸಿ ಕಲಬುರಗಿಯಲ್ಲಿ ಎಡ ಪಕ್ಷಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಟೌನ್ ಹಾಲ್ ಬಳಿಯ ಮಹಾತ್ಮಾಗಾಂಧಿ ಪುತ್ಥಳಿ ಆವರಣದಲ್ಲಿ ಪ್ರತಿಭಟನೆ ನಡೆಸಿದ, ಸಿಪಿಐ, ಸಿಪಿಐಎಂ ಮತ್ತಿತರ ಎಡಪಕ್ಷಗಳ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇರಳದಲ್ಲಿ ಯಡಿಯೂರಪ್ಪ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕೆ ಪ್ರತೀಕಾರವಾಗಿ ಬಿಜೆಪಿ ಕಾರ್ಯಕರ್ತರೇ ಸಿಪಿಐ ಕಚೇರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ, ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂದು ಎಚ್ಚರಿಕೆ ರವಾನಿಸಿದರು. ಕೂಡಲೇ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು. ಬಿಜೆಪಿ ಸರ್ಕಾರ ದ್ವೇಷದ ರಾಜಕರಾಣ ಕೈಬಿಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.