ETV Bharat / city

ಚಿತ್ರಮಂದಿರಗಳ ಕಡೆ ಮುಖಮಾಡಿದ ಸಿನಿ ಪ್ರಿಯರು

author img

By

Published : Feb 5, 2021, 3:14 PM IST

ಕಲಬುರಗಿಯ ಸಂಗಮ್ ಮತ್ತು ತ್ರಿವೇಣಿ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಆರಂಭವಾಗಿದ್ದು, ಸಿನಿಮಾ ವೀಕ್ಷಣೆಗೆ ಬರುವ ಪ್ರೇಕ್ಷಕರಿಗೆ ಮಾಸ್ಕ್​ ಧರಿಸುವುದು ಮತ್ತು ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ.

ಕಲಬುರಗಿಯಲ್ಲಿ ಸಿನಿಮಾ ಪ್ರದರ್ಶನ ಆರಂಭ
ಕಲಬುರಗಿಯಲ್ಲಿ ಸಿನಿಮಾ ಪ್ರದರ್ಶನ ಆರಂಭ

ಕಲಬುರಗಿ: ಇಂದಿನಿಂದ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಆಸನ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲೇ ಸಿನಿ ಪ್ರಿಯರು ಚಿತ್ರಮಂದಿರದ ಕಡೆ ಮುಖಮಾಡಿದ್ದಾರೆ.

ಕಲಬುರಗಿಯಲ್ಲಿ ಸಿನಿಮಾ ಪ್ರದರ್ಶನ ಆರಂಭ

ಕಲಬುರಗಿಯಲ್ಲಿ ಸಹ ಸಂಗಮ್ ಮತ್ತು ತ್ರಿವೇಣಿ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಆರಂಭವಾಗಿದ್ದು, ಪ್ರಜ್ವಲ್ ದೇವರಾಜ್ ಅಭಿನಯದ 'ಇನ್ಸಪೆಕ್ಟರ್ ವಿಕ್ರಂ' ಹಾಗೂ ವಿನೋದ್ ಪ್ರಭಾಕರ್ ನಟನೆಯ 'ಶ್ಯಾಡೋ' ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಿನಿಮಾ ವೀಕ್ಷಣೆಗೆ ಅವಕಾಶ ನೀಡಿರುವ ಹಿನ್ನೆಲೆ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಪ್ರಜ್ವಲ್ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ, ಚಿತ್ರಮಂದಿರಗಳ ಮುಂದೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಮಾಸ್ಕ್ ಕಡ್ಡಾಯ:

ಕೊರೊನಾ ಕಾರಣದಿಂದ ಬಂದ್ ಮಾಡಲಾಗಿದ್ದ ಚಿತ್ರಮಂದಿರಗಳು ಇದೀಗ ಆರಂಭವಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಸಿನಿಮಾ ವೀಕ್ಷಣೆಗೆ ಬರುವ ಪ್ರೇಕ್ಷಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದ್ದು, ಮಾಸ್ಕ್ ಧರಿಸಿದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.