ಕಲಬುರಗಿ: ಅಫಜಲಪೂರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮ ನಾಡ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಈರಣ್ಣ ಪಾಟೀಲ್ (28 ) ಬಂದಿತ ಆರೋಪಿ. ಅಕ್ರಮ ನಾಡ ಪಿಸ್ತೂಲ್ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯಿಂದ ಒಂದು ನಾಡ ಪಿಸ್ತೂಲ್ ಮತ್ತು ಒಂದು ಜೀವಂತ ಗುಂಡು ವಶಪಡಿಸಿಕೊಳ್ಳಲಾಗಿದೆ. ಅಫಜಲಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.