ETV Bharat / city

ಜುಲೈ ಅಥವಾ ಆಗಷ್ಟ್​​​ನಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ : ಸಚಿವ ನಿರಾಣಿ - Chief Minister B.S. Yeddyurappa

ಜಿಲ್ಲೆಯ ಕುಡಿಯುವ ನೀರಿನ ವಿವಿಧ ಹಂತದ ಯೋಜನೆಗಳು, ನೀರಾವರಿ ಯೋಜನೆಗಳು, ರಸ್ತೆಗಳು ಮುಂತಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಇಂತಹ ಅಭಿವೃದ್ಧಿ ಯೋಜನೆಗಳಿಗೆ ಶೇ. 100 ರಷ್ಟು ಸಂಪುಟ ಸಭೆಯಲ್ಲೇ ಪರಿಹಾರ ನೀಡಲು ಪ್ರಯತ್ನಿಸಲಾಗುವುದು..

minister murugesh nirani talk
ಸಚಿವ ನಿರಾಣಿ
author img

By

Published : Jun 23, 2021, 9:04 PM IST

ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿ ವಿಷಯ ಚರ್ಚಿಸಲು ಜುಲೈ ಕೊನೆ ವಾರ ಅಥವಾ ಆಗಸ್ಟ್ ತಿಂಗಳಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಭರವಸೆ ನೀಡಿದರು.

ಓದಿ: Lockdown ವೇಳೆ ಕಳ್ಳರ ಕೈಚಳಕ.. ರಸ್ತೆ ಬದಿ ನಿಲ್ಲಿಸಿದ್ದ ರೋಡ್​ ರೋಲರ್ ಅನ್ನೇ ಗುಜರಿಗೆ ಹಾಕಿದ ಖದೀಮರು

ಗುಲ್ಬರ್ಗಾ ವಿಶ್ವವಿದ್ಯಾಲದ ಮಹಾತ್ಮಗಾಂಧಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಸಂಪುಟ ಸಭೆ ನಡೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕೋರಲಾಗುವುದು ಎಂದು ತಿಳಿಸಿದರು. ಜಿಲ್ಲೆಯ ಕುಡಿಯುವ ನೀರಿನ ವಿವಿಧ ಹಂತದ ಯೋಜನೆಗಳು, ನೀರಾವರಿ ಯೋಜನೆಗಳು, ರಸ್ತೆಗಳು ಮುಂತಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಇಂತಹ ಅಭಿವೃದ್ಧಿ ಯೋಜನೆಗಳಿಗೆ ಶೇ. 100 ರಷ್ಟು ಸಂಪುಟ ಸಭೆಯಲ್ಲೇ ಪರಿಹಾರ ನೀಡಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.

ವಿವಿಧ ಇಲಾಖೆಗಳು ಇಂತಹ ಯೋಜನೆಗಳ ಯೋಜನಾ ವಿಸ್ತೃತ ವರದಿ (ಡಿಪಿಆರ್) ಸಿದ್ಧಪಡಿಸಿಟ್ಟುಕೊಳ್ಳಬೇಕು ಎಂದು ಸಚಿವರು ಆಯಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.