ಕಲಬುರಗಿ: ನಗರದಲ್ಲಿ ಇತ್ತೀಚೆಗೆ ಕಿಡಿಗೇಡಿಗಳ ಅಟ್ಟಹಾಸ ಎಲ್ಲೆ ಮೀರುತ್ತಿದೆ. ಎಣ್ಣೆ ಏಟಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಹಾನಿ ಉಂಟು ಮಾಡುತ್ತಿರುವ ಘಟನೆ ಪದೇ ಪದೇ ವರದಿಯಾಗುತ್ತಿದೆ.
ಕಳೆದ ವಾರವಷ್ಟೇ ನಗರದ ಸ್ವಾಮಿ ವಿವೇಕಾನಂದ ಬಡಾವಣೆಗೆ ಬೈಕ್ನಲ್ಲಿ ಲಗ್ಗೆಯಿಟ್ಟ ದುಷ್ಕರ್ಮಿಗಳು ಮನೆಯ ಮುಂದೆ ನಿಲ್ಲಿಸಿದ್ದ ಕಾರು, ಮನೆ ಗಾಜುಗಳಿಗೆ ಕಲ್ಲಿನಿಂದ ಹೊಡೆದು ಜಖಂಗೊಳಿಸಿದ್ದರು. ಕಿಡಿಗೇಡಿಗಳ ದುಷ್ಕೃತ್ಯ ಸಿಸಿಟಿವಿಯಲ್ಲಿ ಕೂಡ ಸೆರೆಯಾಗಿತ್ತು. ಇದೀಗ ಮತ್ತೆ ನಗರದ ಅಂಬೇಡ್ಕರ್ ಆಶ್ರಯ ಕಾಲೋನಿಯಲ್ಲಿ ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಮೂರು ಬೈಕ್ಗಳಿಗೆ ಬೆಂಕಿ ಹಚ್ಚಿ ಖದೀಮರು ಪರಾರಿಯಾಗಿದ್ದಾರೆ.
ಬೆಂಕಿ ಹತ್ತಿ ಉರಿಯುತ್ತಿರುವುದನ್ನು ಗಮನಿಸಿದ ಜನ ಭಯಭೀತರಾಗಿದ್ದಾರೆ. ಕೂಡಲೇ ಪೊಲೀಸರು ಪುಂಡ ಪೋಕರಿಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕುವಂತೆ ಒತ್ತಾಯಿಸಿದ್ದಾರೆ.