ETV Bharat / city

ಕುರ್ಚಿಗಾಗಿ ಆರ್​ಎಸ್​ಎಸ್​ ತಾಳಕ್ಕೆ ಕುಣಿಯುತ್ತಿರುವ ಸಿಎಂ ಬೊಮ್ಮಾಯಿ : ಪ್ರಿಯಾಂಕ್ ಖರ್ಗೆ ಆರೋಪ

ರಾಜ್ಯದಲ್ಲಿ ಗುಪ್ತಚರ ಇಲಾಖೆ ಏನು ಮಾಡುತ್ತಿದೆ. ಕೇಸರಿ ಶಾಲು ಹಂಚುತ್ತಿರುವುದು ಯಾರು? ರಾಷ್ಟ್ರಧ್ವಜದ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದು ಯಾರು? ಈ ಬಗ್ಗೆ ಮಾಹಿತಿ‌ ಇಲ್ಲವೇ? ಗೃಹ ಸಚಿವರು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿದ್ದಾರೆ‌. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದರು..

author img

By

Published : Feb 12, 2022, 9:19 PM IST

mla-priyank
ಪ್ರಿಯಾಂಕ್​ ಖರ್ಗೆ

ಕಲಬುರಗಿ : ಕುರ್ಚಿ ಉಳಿಸಿಕೊಳ್ಳಲು ಆರ್​ಎಸ್​ಎಸ್ ತಾಳಕ್ಕೆ ತಕ್ಕಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುಣಿಯುತ್ತಿದ್ದಾರೆ ಎಂದು ಕೆಪಿಸಿಸಿ‌ ವಕ್ತಾರ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಜಾಬ್ ವಿವಾದ ದೊಡ್ಡ ಪ್ರಮಾಣದಲ್ಲಿ ಹಬ್ಬಿದೆ. ಹೀಗೆ ಹರಿಬಿಟ್ಟಿದ್ದು ಯಾರು ? ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

ಹಿಜಾಬ್ ವಿವಾದದ ಬಗ್ಗೆ ಶಾಸಕ ಪ್ರಿಯಾಂಕ್​ ಖರ್ಗೆ ಪ್ರತಿಕ್ರಿಯೆ ನೀಡಿರುವುದು..

ಕೊರೊನಾದಿಂದಾಗಿ ಶಾಲೆಗಳು ಬಂದ್ ಆಗಿ ಶಿಕ್ಷಣ ವ್ಯವಸ್ಥೆ ಹಾಳಾಗಿದೆ. ಈಗ ಎದ್ದಿರುವ ವಿವಾದದಿಂದಾಗಿ ಶಾಲೆ ಬಂದ್ ಮಾಡಲಾಗಿದೆ. ರಾಜ್ಯದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ಮಕ್ಕಳ ಶಿಕ್ಷಣದ ಬಗ್ಗೆ ಸರ್ಕಾರಕ್ಕೆ ಗಾಂಭೀರ್ಯತೆ ಇಲ್ಲ ಎಂದು ಟೀಕಿಸಿದರು.

ರಾಜ್ಯದಲ್ಲಿ ಗುಪ್ತಚರ ಇಲಾಖೆ ಏನು ಮಾಡುತ್ತಿದೆ. ಕೇಸರಿ ಶಾಲು ಹಂಚುತ್ತಿರುವುದು ಯಾರು? ರಾಷ್ಟ್ರಧ್ವಜದ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದು ಯಾರು? ಈ ಬಗ್ಗೆ ಮಾಹಿತಿ‌ ಇಲ್ಲವೇ? ಗೃಹ ಸಚಿವರು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿದ್ದಾರೆ‌. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದರು.

ಕೇಸರಿ ತ್ಯಾಗದ ಸಂಕೇತವೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಕೇರಳ ಹೈಕೋರ್ಟ್ ಹಾಗೂ ಸುಪ್ರೀಂಕೋಟ್​ ಈ‌ ವಿಚಾರದಲ್ಲಿ ಸ್ಪಷ್ಟನೆ ನೀಡಿದೆ. ಕೈಬಳೆ, ಕುಂಕುಮ, ತಾಯತ, ಹಿಜಾಬ್​ ಹಾಗೂ ಸಿಖ್ಖರ ಟರ್ಬನ್ (ಪೇಟ) ಆಯಾ ಧರ್ಮದ ಸಂಪ್ರದಾಯಗಳು ಎಂದು ಹೇಳಿವೆ. ಆದರೆ ಕೇಸರಿ‌ ಶಾಲು ಏನು? ಇದು ಯಾವ ಧರ್ಮದ ಸಂಕೇತ? ಇದು ಕೇವಲ ರಾಜಕೀಯ ಪ್ರೇರಿತ ಸಂಕೇತವಾಗಿದೆ ಎಂದರು.

ಓದಿ: ಸೋಮವಾರದಿಂದ ಜಂಟಿ ಅಧಿವೇಶನ ಆರಂಭ : ವಾಕ್ಸಮರಕ್ಕೆ ಸಜ್ಜಾದ ಆಡಳಿತ- ಪ್ರತಿಪಕ್ಷಗಳು!?

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.