ಕಲಬುರಗಿ: ಹೆತ್ತ ತಾಯಿ ತನ್ನ ಮೂವರು ಮಕ್ಕಳ ಜೊತೆ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲುಕುವ ಘಟನೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ನಡೆದಿದೆ.
ತಾಯಿ ಅಂಬಿಕಾ (32) ಮತ್ತು ಒಂದು ಮಗುವಿನ ಮೃತದೇಹ ಪತ್ತೆಯಾಗಿದ್ದು, ಉಳಿದ ಇಬ್ಬರು ಮಕ್ಕಳಿಗಾಗಿ ಶೋಧಕಾರ್ಯ ಮುಂದುವರೆದಿದೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಹೇಳತೀರದಂತಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಸ್ತಿ ವಿಚಾರವಾಗಿ ಇದೊಂದು ವ್ಯವಸ್ಥಿತ ಕೊಲೆ ಎಂದು ಕೆಲ ಗ್ರಾಮಸ್ಥರು ಆರೋಪಿಸಿದ್ದಾರೆ. ಆದ್ರೆ, ಪೊಲೀಸ್ ಮೂಲಗಳ ಪ್ರಕಾರ, ಕೌಟುಂಬಿಕ ಕಲಹದಿಂದ ಹೀಗೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಈ ಕುರಿತು ಮಾದನಹಿಪ್ಪರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ: ಸಿನಿಮಾ ನೋಡಿ ಮುಕ್ತಿ ಬೇಕೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ