ಕಲಬುರಗಿ: ಗಾರ್ಡನ್ನಲ್ಲಿ ಉಸಿರುಗಟ್ಟಿಸಿ ಬಾಲಕನೊಬ್ಬನನ್ನು ಕೊಲೆ ಮಾಡಿದ ಘಟನೆ ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ತಡರಾತ್ರಿ ನಡೆದಿದೆ.
ಹೌಸಿಂಗ್ ಬೋರ್ಡ್ ನಿವಾಸಿ ಕಿರಣ್ ಹೊಸಮನಿ (17) ಕೊಲೆಯಾದವ. ಈತ ಕೂಲಿ ಕೆಲಸ ಮಾಡುತ್ತಿದ್ದ. ನಿನ್ನೆ ಮನೆಯಿಂದ ಹೊರ ಹೋಗಿದ್ದ ಈತ ಇಂದು ಗಾರ್ಡನ್ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮನೆಯಲ್ಲಿ ಯಾದಗಿರಿ ಜಿಲ್ಲೆಯ ಮೈಲಾಪುರದ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಹೋಗಿದ್ದ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಉಪ ಚುನಾವಣೆಯಲ್ಲಿ ಬಿಜೆಪಿ ಚಿಹ್ನೆಯಡಿ ಯಾರೇ ಸ್ಪರ್ಧಿಸಿದ್ರೂ ಗೆಲುವು ಖಚಿತ: ಸಚಿವ ಅಶ್ವತ್ಥ ನಾರಾಯಣ್
ಸದ್ಯ ಕೊಲೆಗೆ ಕಾರಣ ಹಾಗೂ ಯಾರು ಕೊಲೆ ಮಾಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಈ ಸಂಬಂಧ ಎಮ್ಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.