ETV Bharat / city

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ - arrest of Rowdy Langda Salim

ಚಿತ್ತಾಪುರ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುಡಿರೌಡಿ ಲಂಗ್ಡಾ ಸಲೀಂನನ್ನು ಪೊಲೀಸರು ಬಂಧಿಸಿದ್ದಾರೆ.

murder
ಯುವಕನ ಬರ್ಬರ ಹತ್ಯೆ
author img

By

Published : Dec 12, 2021, 1:13 PM IST

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಯುವಕನ ಹತ್ಯೆಗೈದ ಘಟನೆ ಚಿತ್ತಾಪುರ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ನಡೆದಿದೆ. ಮಹಮ್ಮದ್ ರಶೀದ್ (26) ಕೊಲೆಯಾದ ಯುವಕ. ಪುಡಿರೌಡಿ ಲಂಗ್ಡಾ ಸಲೀಂ ಕೊಲೆಗೈದ ಆರೋಪಿ.

ಪೊಲೀಸರು ಲಂಗ್ಡಾ ಸಲೀಂನನ್ನು ಬಂಧಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ರಶೀದ್ ಹಾಗೂ ಸಲೀಂ ಮಧ್ಯೆ ಜಗಳ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿದಾಗ ಸಲೀಂ, ರಶೀದ್‌ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಚಿತ್ತಾಪುರ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ

ಲಂಗ್ಡಾ ಸಲೀಂ ಗಾಂಜಾ ಮಾರಾಟ ಮಾಡುತ್ತಿದ್ದ. ಸಲೀಂ ಬಳಿ ರಶೀದ್ ಗಾಂಜಾ ಖರೀದಿಗೆ ಹೋದಾಗ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಇನ್ನೊಂದೆಡೆ, ಹುಡುಗಿಯ ವಿಚಾರವಾಗಿ ಸಹ ಇಬ್ಬರ ನಡುವೆ ಗಲಾಟೆ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಚಿತ್ತಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.