ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
![Murder of BJP activist with knife in kalaburagi](https://etvbharatimages.akamaized.net/etvbharat/prod-images/11094727_thum.jpg)
ಕೊಲೆಯಾದ ವ್ಯಕ್ತಿಯನ್ನು ಸಂಗನಗೌಡ ಪೊಲೀಸ್ ಪಾಟೀಲ (32) ಎಂದು ಗುರುತಿಸಲಾಗಿದೆ. ಸಂಗನಗೌಡ ಕುತ್ತಿಗೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.