ಕಲಬುರ್ಗಿ: ರಾಜ್ಯ ಸರ್ಕಾರಿ ನೌಕರರ ಸಂಘದ ಮತದಾರರ ಪಟ್ಟಿಯಲ್ಲಿ ಹಲವು ನೌಕರರ ಹೆಸರು ಮಿಸ್ ಆಗಿದ್ದು, ಉದ್ದೇಶಪೂರ್ವಕವಾಗಿಯೇ ಹೆಸರು ತೆಗೆದು ಹಾಕಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೌಕರರು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ನೌಕರರ ಭವನದಲ್ಲಿ ತುರ್ತು ಸಭೆ ನಡೆಸಿದ ನೌಕರರು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 40 ನೌಕರರ ಹೆಸರನ್ನು ಉದ್ದೇಶಪೂರ್ಕವಾಗಿ ತೆಗೆದು ಹಾಕಲಾಗಿದೆ ಎಂದು ಆರೋಪಿದರು. ಮತದಾರರ ಪಟ್ಟಿಯಿಂದ ಕೈಬಿಟ್ಟ 40 ನೌಕರರ ಹೆಸರು ಮರು ಸೇರ್ಪಡೆ ಮಾಡುವ ಮೂಲಕ ತಮ್ಮ ಇಲಾಖೆಯ ಪ್ರತಿನಿಧಿಗಳ ಸಂಖ್ಯೆ ಹೆಚ್ಚಿಸುವಂತೆ ಒತ್ತಾಯಿಸಿದರು. ಇಲ್ಲದಿದ್ದಲ್ಲಿ ಮುಂಬರುವ ನೌಕರರ ಸಂಘದ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ ನೀಡಿದರು.