ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಕಲಬುರಗಿ ಮಹಾನಗರ ಪಾಲಿಕೆ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ದಂಡ ವಿಧಿಸಲು ಮುಂದಾಗಿದೆ. ಸಾರ್ವಜನಿಕ ಸ್ಥಳದಲ್ಲಿ ತಿರುಗಾಡುವವರು ಹಾಗೂ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಸೂಚಿಸಿದ್ದಾರೆ.
ಓದಿ: ಕನ್ನಡಿಗರ ವಿರುದ್ಧ ನಾಲಿಗೆ ಹರಿಬಿಟ್ಟ ಎಂಇಎಸ್ ಪುಂಡ : ಬೆಳಗಾವಿಯಲ್ಲಿ ನಾಡದ್ರೋಹಿಯ ಉದ್ಧಟತನ
ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ಪಾಲಿಕೆ ಹೂಸ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಿದೆ. ಕೋವಿಡ್ ನಿಯಂತ್ರಣಕ್ಕಾಗಿ ಶಾಪಿಂಗ್ ಮಾಲ್, ಚಿತ್ರಮಂದಿರ, ಹೋಟೆಲ್, ರೆಸ್ಟೋರೆಂಟ್, ವಾಣಿಜ್ಯ ಅಂಗಡಿ-ಮುಂಗಟ್ಟುಗಳಿರುವ ಸ್ಥಳದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸದಿದ್ದರೆ ಪ್ರವೇಶ ನಿಷೇಧಿಸಿ ಎಂದು ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ವಾಣಿಜ್ಯ ಅಂಗಡಿಗಳ ಮಾಲೀಕರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಒಂದು ವೇಳೆ ಮಾಸ್ಕ್ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಪ್ರವೇಶ ನೀಡಿದಲ್ಲಿ ಅಂತಹ ವಾಣಿಜ್ಯ ಅಂಗಡಿಗಳ ಮಾಲೀಕರಿಗೆ ದಂಡ ಹಾಕಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಲೋಖಂಡೆ ವಾರ್ನ್ ಮಾಡಿದ್ದಾರೆ.
ಮಾಸ್ಕ್ ಧರಿಸದಿದ್ದರೆ ದಂಡ:
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಪಾಲಿಕೆ ಅಧಿಕಾರಿಗಳು ಮತ್ತೆ ದಂಡ ವಸೂಲಿಗೆ ಮುಂದಾಗಿದ್ದಾರೆ. ಮಾಸ್ಕ್ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಸುತ್ತಾಡುವವರಿಗೆ ಹಾಗೂ ವಾಹನ ಸವಾರರನ್ನು ಹಿಡಿದು ಪೊಲೀಸರು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ದಂಡ ವಸೂಲಿ ಮಾಡುತ್ತಿದ್ದಾರೆ. 100ರಿಂದ 250 ರೂ.ವರೆಗೆ ದಂಡ ಹಾಕಲಾಗುತ್ತಿದೆ. ಅಲ್ಲದೆ ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಸೂಚನೆ ನೀಡುತ್ತಿದ್ದಾರೆ.