ಕಲಬುರಗಿ: ರಾಜ್ಯದಲ್ಲಿ ಭೀಕರ ಪ್ರವಾಹ ಉಂಟಾಗಿರುವ ಕಾರಣ ಈ ಬಾರಿ ಹುಟ್ಟುಹಬ್ಬ ಆಚರಿಸದಿರಲು ಅಭಿಮಾನಿಗಳಿಗೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಭೀಕರ ಪ್ರವಾಹ ಎದುರಾಗಿರುವ ಕಾರಣ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಈ ಸನ್ನಿವೇಶದಲ್ಲಿ ಹುಟ್ಟುಹಬ್ಬ ಆಚರಣೆ ಸರಿಯಲ್ಲ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಫೇಸ್ಬುಕ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಆಡಂಬರದ ಆಚರಣೆಯ ಬದಲಿಗೆ 3 ದಿನಗಳ ಕಾಲ ಅಂದರೆ ನವೆಂಬರ್ 21 ರಿಂದ 25ರ ವರೆಗೆ ವಿಪಾಸನ ಧ್ಯಾನದಲ್ಲಿ ತೊಡಗಿಕೊಳ್ಳುವುದಾಗಿ ಅವರು ಬರೆದುಕೊಂಡಿದ್ದಾರೆ.