ETV Bharat / city

ಪಿಎಸ್ಐ ಅಕ್ರಮದ ಸಿಐಡಿ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ: ಪ್ರಿಯಾಂಕ್​​ ಖರ್ಗೆ

ಪಿಎಸ್ಐ ಅಕ್ರಮ ಸಂಬಂಧ ಬೆಂಗಳೂರಿನಲ್ಲಿನ ಮಹಾ ಕಿಂಗ್‌ಪಿನ್‌ಗಳನ್ನು ಯಾಕೆ ಬಂಧಿಸುತ್ತಿಲ್ಲ?. ನನಗೆ ಮೂರು ನೋಟಿಸ್ ನೀಡುವ ಸರ್ಕಾರಕ್ಕೆ, ಅಧಿಕಾರಿಗಳಿಗೆ/ಸಚಿವರಿಗೆ ಎಷ್ಟು ನೋಟಿಸ್ ನೀಡಿದ್ದಿರಿ?- ಶಾಸಕ ಪ್ರಿಯಾಂಕ್​​ ಖರ್ಗೆ

Priyank Kharge
ಪ್ರಿಯಾಂಕ್​​ ಖರ್ಗೆ
author img

By

Published : May 13, 2022, 2:19 PM IST

ಕಲಬುರಗಿ: ಪಿಎಸ್‌ಐ ಪರೀಕ್ಷಾ ನೇಮಕಾತಿ ಅಕ್ರಮ ಪ್ರಕರಣ ಕುರಿತಾಗಿ ಕಲಬುರಗಿಯಲ್ಲಿ ಶಾಸಕ ಪ್ರಿಯಾಂಕ್​​ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಿಐಡಿ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ. ತನಿಖಾಧಿಕಾರಿಗಳು ಕಲಬುರಗಿ ಜಿಲ್ಲೆಗೆ ಮಾತ್ರ ಕೇಂದ್ರೀಕೃತವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದ ಬೇರೆ ಕಡೆ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಸರ್ಕಾರ ಆಸಕ್ತಿ ತೋರಿಸುತ್ತಿಲ್ಲ ಎಂದಿದ್ದಾರೆ.

ಆರ್‌.ಡಿ.ಪಾಟೀಲ್ ಸೇರಿದಂತೆ ಕೆಲವರು ಸರ್ಕಾರಕ್ಕೆ ಚಾಲೆಂಜ್ ಎಸೆಯುತ್ತಿದ್ದಾರೆ. ಅಕ್ರಮದಲ್ಲಿ ಇನ್ಯಾರು ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಬಹಿರಂಗಪಡಿಸುತ್ತೇವೆ ಎಂದು ಬಂಧಿತರು ಹೇಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಆದರೆ ಹೆಸರು ಬಹಿರಂಗಗೊಳಿಸುವುದಕ್ಕೆ ಸರ್ಕಾರ ಯಾಕೆ ಹಿಂದೇಟು ಹಾಕುತ್ತಿದೆ? ಎಂದು ಪ್ರಶ್ನಿಸಿದರು.

ಹೆಸರು ಬಹಿರಂಗಗೊಳಿಸಿದರೆ ಸರ್ಕಾರ ಬಿದ್ದು ಹೋಗುತ್ತದೆ ಎಂದು ಆರ್​.‌ಡಿ.ಪಾಟೀಲ್ ಹೇಳಿದ್ದಾನೆ. ಮಧ್ಯವರ್ತಿಗಳು ಯಾರ ಪರ ಕೆಲಸ ಮಾಡುತ್ತಿದ್ದಾರೆ ಎಂದು ಗೊತ್ತಾಗಬೇಕು ಎಂದು ಪ್ರಿಯಾಂಕ್​​ ಖರ್ಗೆ ಹೇಳಿದರು.

ಇದನ್ನೂ ಓದಿ: 'ಪಿಎಸ್‌ಐ ಅಕ್ರಮದ ಬಗ್ಗೆ ಪ್ರಭು ಚವ್ಹಾಣ್ ಪತ್ರ ಬರೆದಾಗ ಯಾಕೆ ಕ್ರಮ ಕೈಗೊಳ್ಳಲಿಲ್ಲ?'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.