ಕಲಬುರಗಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಬಂದ್ ಕರೆ ಹಿನ್ನೆಲೆ ನಗರದಲ್ಲಿ ಬಂದ್ ಬೆಂಬಲಿಸಿ ಶ್ರಮಜೀವಿಗಳ ವೇದಿಕೆ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಸರೋಜಿನಿ ಮಹಿಷಿ ವರದಿಯನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ಖಾಸಗಿ ವಲಯದಲ್ಲಿಯೂ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ನೀಡುವಂತೆ ಹಾಗೂ ಜಿಲ್ಲೆಯ ಎಸಿಸಿ, ಅಲ್ಟ್ರಾ ಟೆಕ್, ವಾಸವದತ್ತ ಸೇರಿದಂತೆ 10 ಕಂಪನಿಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡುವಂತೆ ಒತ್ತಾಯಿಸಿ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.