ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ದಿವ್ಯಾ ಹಾಗರಗಿಯನ್ನು ಇಂದು ಜೈಲಿಗೆ ಸ್ಥಳಾಂತರಿಸಲಾಗುತ್ತದೆ. ಸಿಐಡಿ ಕಸ್ಟಡಿಯ ಕಾಲಾವಕಾಶ ಮುಕ್ತಾಯವಾಗಿದ್ದು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ನಂತರ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗುತ್ತದೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ದಿವ್ಯಾ ಹಾಗರಗಿ 18 ದಿನಗಳ ನಂತರ ಮಹಾರಾಷ್ಟ್ರದ ಪುಣೆಯಲ್ಲಿ ಬಂಧನಕ್ಕೊಳಗಾಗಿದ್ದರು. ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಹೆಚ್ಚಿನ ವಿಚಾರಣೆಗಾಗಿ 11 ದಿನ ಸಿಐಡಿ ಕಸ್ಟಡಿಗೆ ಪಡೆದಿತ್ತು. ಬಹುತೇಕ ವಿಚಾರಣೆ ಮುಕ್ತಾಯವಾಗಿದ್ದು ಮತ್ತೆ ಕಸ್ಟಡಿಗೆ ಪಡೆಯುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಪ್ರಕರಣ: ಬಂದೋಬಸ್ತ್ನಲ್ಲಿ ದಿವ್ಯಾ ಹಾಗರಗಿಯನ್ನು ಕಲಬುರಗಿಗೆ ಕರೆ ತಂದ ಸಿಐಡಿ
11 ದಿನ ಸುದೀರ್ಘ ವಿಚಾರಣೆ ನಡೆಸಿದ ಸಿಐಡಿ ತಂಡ ಅನೇಕ ಮಾಹಿತಿ ಕಲೆ ಹಾಕಿದ್ದಾರೆ. ನಿನ್ನೆ(ಭಾನುವಾರ) ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಶಾಲೆ, ಹಳೆ ಜೇವರ್ಗಿ ರಸ್ತೆಯಲ್ಲಿರುವ ಮನೆ ಸ್ಥಳ ಮಹಜರ್ ಮಾಡಿದ್ದಾರೆ. ಶಾಲೆಯಲ್ಲಿ ಜೆರಾಕ್ಸ್ ಮಶೀನ್ ಸೇರಿದಂತೆ ಕೆಲ ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: ಪಿಎಸ್ಐ ಪರೀಕ್ಷೆ ಅಕ್ರಮ: ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಜೈಲಿಗೆ ಸ್ಥಳಾಂತರ