ಕಲಬುರಗಿ: ಪಿಎಸ್ಐ ಅಕ್ರಮ ಪರೀಕ್ಷೆ ಆರೋಪದಡಿ ತಲೆಮರೆಸಿಕೊಂಡಿದ್ದ ಪರೀಕ್ಷಾರ್ಥ ಅಭ್ಯರ್ಥಿ ಶಾಂತಿಬಾಯಿ ಮತ್ತು ಆಕೆಯ ಪತಿ ಬಸ್ಯಾನಾಯಕನನ್ನು ಹೈದರಾಬಾದ್ನಲ್ಲಿ ಪೊಲೀಸರು ಬಂಧಿಸಿದ್ದರು. ಆರೋಪಿ ದಂಪತಿ ಜಾಮೀನು ಕೋರಿ ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, 3 ನೇ ಜೆಎಂಎಫ್‌ಸಿ ನ್ಯಾಯಾಧೀಶರಾದ ಶ್ರೀನಿವಾಸ ಕೆ ಅವರು ಇವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.
545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಬಾರಿ ಅಕ್ರಮ ನಡೆದಿದ್ದು, ಇದರಲ್ಲಿ ಭಾಗಿಯಾದ್ದ ಪರೀಕ್ಷಾರ್ಥ ಅಭ್ಯರ್ಥಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಅನೇಕರನ್ನು ಬಂಧಿಸಲಾಗಿತ್ತು. ವಿಷಯ ಬೆಳಕಿಗೆ ಬರುತ್ತಿದ್ದಂತೆ ಶಾಂತಿಬಾಯಿ ಮತ್ತು ಪತಿ ಬಸ್ಯಾನಾಯಕ ದಂಪತಿ ತಮ್ಮ ಮಗುವಿನೊಂದಿಗೆ ಊರು ತೊರೆದಿದ್ದರು. ಪ್ರಕರಣ ನಡೆದು ಹಲವು ದಿನಗಳ ನಂತರ ಆರೋಪಿಗಳನ್ನು ಬಂಧಿಸಲಾಗಿತ್ತು.
ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಶಾಂತಿಬಾಯಿ ಪರೀಕ್ಷೆ ಬರೆದಿದ್ದು, ಹಣ ನೀಡಿ ಒಎಮ್‌ಆರ್ ಶೀಟ್ನಲ್ಲಿ ನಕಲು ಮಾಡಿ ಪಿಎಸ್ಐನ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ನೇಮಕವಾಗಿದ್ದರು ಎಂಬ ಆರೋಪದಡಿ ಇವರನ್ನು ಬಂಧಿಸಲಾಗಿದೆ. ಇದೀಗ ಇವರ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ.
ಇದನ್ನೂ ಓದಿ: ಹಾಸನ: ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ್ದ ಆರೋಪಿಗಳು ಕೊನೆಗೂ ಅರೆಸ್ಟ್