ಕಲಬುರಗಿ: ಯುವಕನೋರ್ವ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಗರದ ಟೌನ್ಹಾಲ್ ಬಳಿ ಇರುವ ಅನ್ನಪೂರ್ಣ ಕ್ರಾಸ್ ಬಳಿ ನಡೆದಿದೆ.
ಮಹ್ಮದ್ ಖಲೀಲ್ (24) ಮೃತ ದುರ್ದೈವಿ. ರಂಜಾನ್ ಜಾಗರಣೆ ಮುಗಿಸಿ ಚಹಾ ಕುಡಿಯಲೆಂದು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೈಕ್ನಲ್ಲಿ ಹೋಗುತ್ತಿರುವ ಎದುರಿಗೆ ಬಂದ ಟಾಟಾ ಏಸ್ ವಾಹನ ಡಿಕ್ಕಿಯಾಗಿದೆ.
ಪರಿಣಾಮ ಬೈಕ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಇನ್ನೊರ್ವ ಗಂಭೀರ ಗಾಯಗೊಂಡಿದ್ದಾನೆ. ಇನ್ನು ಗಾಯಾಳುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.