ETV Bharat / city

'ನನ್ನನ್ನು ಸೋಲಿಸಿದ ಆರ್‌ಎಸ್‍ಎಸ್ ತಂಡ ಪ್ರಿಯಾಂಕ್ ಖರ್ಗೆಯನ್ನು ಟಾರ್ಗೆಟ್ ಮಾಡ್ತಿದೆ'

ನನ್ನನ್ನು ಸೋಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆರ್‌ಎಸ್‍ಎಸ್ ತಂಡ ಈಗ ಪ್ರಿಯಾಂಕ್ ಖರ್ಗೆ ಅವರನ್ನು ಟಾರ್ಗೆಟ್ ಮಾಡಲು ಹೊರಟಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

Mallikarjuna Kharge
ಮಲ್ಲಿಕಾರ್ಜುನ ಖರ್ಗೆ
author img

By

Published : May 18, 2022, 6:47 AM IST

ಕಲಬುರಗಿ: ಬಿಜೆಪಿಯವರು ಸೈದ್ಧಾಂತಿಕ ತಳಹದಿಯ ಮೇಲೆ ರಾಜಕಾರಣ ಮಾಡುವ ಬದಲು ದ್ವೇಷ ರಾಜಕಾರಣಕ್ಕೆ ಮುಂದಾಗಿದ್ದಾರೆ. ನನ್ನನ್ನು ಸೋಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆರ್‌ಎಸ್‍ಎಸ್ ತಂಡ ಈಗ ಪ್ರಿಯಾಂಕ್ ಖರ್ಗೆಯನ್ನು ಟಾರ್ಗೆಟ್ ಮಾಡುತ್ತಿದೆ ಎಂದು ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ಕಲಬುರಗಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಈ ಹಿಂದೆ ಸಂಸತ್ತಿನಲ್ಲಿ ಪ್ರಧಾನಿಯವರು ಮಾತನಾಡುವಾಗ 'ಖರ್ಗೆಯವರೇ ನೀವು ಮುಂದೆ ಗೆಲ್ಲುತ್ತೀರೋ ಇಲ್ಲವೋ ಗೊತ್ತಿಲ್ಲ' ಎಂದು ಸೂಚ್ಯವಾಗಿ ನನ್ನ ಸೋಲಿನ ಮುನ್ಸೂಚನೆ ನೀಡಿದ್ದರು. ಇದಾದ ಬಳಿಕ ಕಲಬುರಗಿಯಲ್ಲಿ ಇಡೀ ಆರ್‌ಎಸ್‍ಎಸ್ ತಂಡ ಠಿಕಾಣಿ ಹೂಡಿ ನನ್ನನ್ನು ಸೋಲಿಸುವಲ್ಲಿ ಯಶಸ್ವಿಯಾಗಿತ್ತು. ಈಗ ಅದೇ ಆರ್‌ಎಸ್‍ಎಸ್ ಪ್ರಾಯೋಜಿತ ರಾಜಕಾರಣ ಪ್ರಿಯಾಂಕ್ ಖರ್ಗೆ ಅವರನ್ನು ಟಾರ್ಗೆಟ್ ಮಾಡುವ ಹುನ್ನಾರ ನಡೆಸುತ್ತಿದ್ದು, ಅದೇ ಧಾಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಸೋಮವಾರ ಕಲಬುರಗಿ ಪ್ರವಾಸದಲ್ಲಿರುವಾಗ ಮಾತನಾಡಿದ್ದಾರೆ ಎಂದರು.

ಇತ್ತೀಚೆಗೆ ಆರ್​​ಎಸ್‍ಎಸ್ ಪ್ರಮುಖರಾದ ಮೋಹನ್ ಭಾಗವತ್ ಕಲಬುರಗಿಯಲ್ಲಿ ಎರಡು ದಿನಗಳ ಕಾಲ ವಾಸ್ತವ್ಯ ಹೂಡಿ ದ್ವೇಷ ರಾಜಕಾರಣಕ್ಕೆ ವೇದಿಕೆ ರೂಪಿಸಿ ಹೋಗಿದ್ದಾರೆ. ಅದರ ಮುಂದುವರೆದ ಭಾಗವಾಗಿ ಕಟೀಲ್ ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆಯವರನ್ನು ಸೋಲಿಸುವಂತೆ ಕರೆ ಕೊಟ್ಟಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಮತಾಂತರ ನಿಷೇಧದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ: ರಾಜ್ಯದಲ್ಲಿ ಅಧಿಕೃತವಾಗಿ ಕಾಯ್ದೆ ಜಾರಿ

ಜ್ಞಾನವಾಪಿ ಮಸೀದಿ ಪ್ರಕರಣ: ಬಿಜೆಪಿ ಈಗಾಗಲೇ ದೇಶಾದ್ಯಂತ ತೋಡ್‍ಪೋಡ್ ರಾಜಕಾರಣ ನಡೆಸುತ್ತಿದೆ. ಜ್ಞಾನವಾಪಿ ಪ್ರಕರಣ ಕೂಡ ಅದರ ಒಂದು ಭಾಗ. ಇಷ್ಟಕ್ಕೂ ಪೂಜೆ ಮಾಡುವವರು ತಮ್ಮ ತಮ್ಮ ಮನೆಗಳಲ್ಲಿ ಇರುವ ಶಿವನ ಮೂರ್ತಿಗೆ ಪೂಜೆ ಮಾಡಿದರೆ ಆಯಿತು. ಅದನ್ನು ಬಿಟ್ಟು ಮಸೀದಿಯಲ್ಲಿರುವ ಶಿವನ ಮೂರ್ತಿಗೆ ಪೂಜೆ ಮಾಡಬೇಕು ಎನ್ನುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು. ಪ್ರಕರಣ ನ್ಯಾಯಾಲಯದಲ್ಲಿದೆ. ಹೀಗಾಗಿ, ಈ ವಿಷಯದಲ್ಲಿ ಹೆಚ್ಚು ಪ್ರಸ್ತಾಪ ಮಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.