ಕಲಬುರಗಿ : ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರ ಸೀನಿಯರ್ ಐಎಎಸ್ ಅಧಿಕಾರಿಯನ್ನ ನೇಮಕ ಮಾಡಿದೆ ಎಂದು ವಸತಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ. ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಪ್ರಧಾನಮಂತ್ರಿಗಳು ಎಲ್ಲಾ ರೀತಿಯ ವ್ಯವಸ್ಥೆ ಮಾಡುತ್ತಿದ್ದಾರೆ.
ಜೊತೆಗೆ ವಿದೇಶಾಂಗ ಸಚಿವರ ಜೊತೆಗೂ ಮುಖ್ಯಮಂತ್ರಿಗಳು ಈ ಕುರಿತು ಮಾತನಾಡಿದ್ದಾರೆ. ಎಲ್ಲಾ ಭಾರತೀಯರನ್ನು ಜೊತೆಗೆ ಕನ್ನಡಿಗರನ್ನು ಕರೆತರಲು ಎಲ್ಲಾ ರೀತಿಯ ವ್ಯವಸ್ಥೆ ಕೂಡ ಮಾಡಲಾಗುತ್ತಿದೆ.
ಯಾರು ಆತಂಕಪಡುವ ಅವಶ್ಯಕತೆ ಇಲ್ಲ. ಎಲ್ಲರೂ ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುವುದಾಗಿ ಹೇಳಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ನವರಿಗೆ ಒಳ್ಳೆಯದಾಗಲಿ ಎಂದು ವ್ಯಂಗ್ಯವಾಡಿದ್ದಾರೆ.
ಓದಿ :ಮಂಗಳೂರಿನ ಖಾಸಗಿ ಶಾಲೆಯಲ್ಲಿ ಉದ್ಭವಿಸಿದ್ದ ಟರ್ಬನ್ ಸಮಸ್ಯೆ ಮಾತುಕತೆ ಮೂಲಕ ಪರಿಹಾರ