ಕಲಬುರಗಿ : ಜಿಲ್ಲೆಯ ಕಾಳಗಿ ಪಟ್ಟಣದ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶಿವಬಸವ ಶಿವಾಚಾರ್ಯರು (45) ಹೃದಯಘಾತದಿಂದ ಲಿಂಗೈಕ್ಯರಾಗಿದ್ದಾರೆ.
ಇಂದು ಬೆಳ್ಳಗೆ ಮಠದಲ್ಲಿ ದಿಢೀರ್ ಕುಸಿದುಬಿದ್ದ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೀಗ ಚಿಕಿತ್ಸೆ ಫಲಿಸದೆ ಶ್ರೀಗಳು ನಿಧನರಾಗಿದ್ದಾರೆ.
ಕಳೆದ 25 ವರ್ಷಗಳಿಂದ ಮಠದ ಪೀಠಾಧಿಪತಿಯಾಗಿ ಕಾರ್ಯ ನಿರ್ವಹಿಸಿದ್ದ ಶ್ರೀಗಳು, ದಕ್ಷಿಣಕಾಶಿ ವಿದ್ಯಾಭಿವೃದ್ಧಿ ಟ್ರಸ್ಟ್ ಎಂಬ ಶಿಕ್ಷಣ ಸಂಸ್ಥೆಯನ್ನ ಹುಟ್ಟುಹಾಕಿ ಶೈಕ್ಷಣಿಕವಾಗಿಯೂ ಸೇವೆ ಸಲ್ಲಿಸಿದ್ದಾರೆ.
ಶ್ರೀಗಳ ಅಂತ್ಯಕ್ರಿಯೆ ಮಂಗಳವಾರ ಬೆಳಗ್ಗೆ 11 ಗಂಟೆಗೆ ಧಾರ್ಮಿಕ ವಿಧಿವಿಧಾನಗಳ ಪ್ರಕಾರ ಕಾಳಗಿಯಲ್ಲಿ ನೆರವೇರಿಸಲಾಗುವುದು ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.