ಕಲಬುರಗಿ: ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯದ ನೇಮಕಾತಿಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಬಿಸಿ ತಟ್ಟಿದೆ.
ಹೊಸ ಕೋರ್ಸ್ ಗಳನ್ನು ಪರಿಚಯಿಸಲು ಅನುಮತಿ ಪಡೆದಿರುವ ಕೇಂದ್ರೀಯ ವಿಶ್ವವಿದ್ಯಾಲಯ ಬೋಧಕರ ನೇಮಕಾತಿಯ ಅನುಮತಿಗಾಗಿ ಕಾಯುತ್ತ ಕೂಡುವಂತಾಗಿದೆ.
ವಿಶ್ವವಿದ್ಯಾಲಯ ಸ್ವಾಯತ್ತ ಸಂಸ್ಥೆಯಾಗಿದ್ದು, ನೀತಿ ಸಂಹಿತೆ ವ್ಯಾಪ್ತಿಗೆ ಬರೋದಿಲ್ಲ. ಆದರೂ ಜಿಲ್ಲಾಧಿಕಾರಿಗಳ ಅನುಮತಿ ಕೋರಲಾಯಿತು. ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದರು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು 10 ದಿನ ಗತಿಸಿದರು ಸೂಕ್ತ ಉತ್ತರ ಬಂದಿಲ್ಲ. ಹೊಸ ಕೋರ್ಸ್ ಗಳ ಪ್ರಾರಂಭಕ್ಕೆ ಮಾಡಿಕೊಂಡಿರುವ ಸಿದ್ಧತೆಗೆ ಇದರಿಂದ ತೊಂದರೆಯಾಗಲಿದೆ ಎಂದು ವಿವಿ ಕುಲಪತಿ ಪ್ರೊ.ಹೆಚ್.ಎಂ.ಮಹೇಶ್ವರಯ್ಯ ತಿಳಿಸಿದ್ದಾರೆ.