ಕಲಬುರ್ಗಿ : ಭೀಮಾ ನದಿ ಒಳಹರಿವು ಹೆಚ್ಚಳವಾಗಿರುವ ಹಿನ್ನೆಲೆ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್‌ಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ.
ಸೊನ್ನ ಬ್ಯಾರೇಜ್ ಒಳಹರಿವು ಹೆಚ್ಚಳವಾದ ಹಿನ್ನೆಲೆ ಭೀಮಾ ನದಿಗೆ ಯಾವುದೇ ಸಂದರ್ಭದಲ್ಲಿ ನೀರು ಬಿಡೋ ಸಾಧ್ಯತೆಗಳಿವೆ. ಆದ್ದರಿಂದ ಭೀಮಾ ನದಿ ಪಾತ್ರದ ಅಫಜಲಪುರ, ಜೇವರ್ಗಿ ಹಾಗೂ ಚಿತ್ತಾಪುರ ತಾಲೂಕಿನ ಜನರಲ್ಲಿ ಆತಂಕ ಮನೆ ಮಾಡಿದೆ.
ಸದ್ಯ ನದಿ ತೀರದ ಗ್ರಾಮಸ್ಥರು ಎಚ್ಚರದಿಂದಿರಲು ಜಿಲ್ಲಾಡಳಿತ ಸೂಚಿಸಿದೆ. ಜನ, ಜಾನುವಾರುಗಳು ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನದಿ ಪಾತ್ರದಲ್ಲಿನ ಬ್ಯಾರೇಜ್‌ಗಳನ್ನ ಸುಸ್ಥಿತಿಯಲ್ಲಿಡಲು ಕ್ರಮ ವಹಿಸುವಂತೆ ಆದೇಶಿಸಲಾಗಿದೆ.