ETV Bharat / city

ಕಲಬುರಗಿ; ಸೂಕ್ತ ಬಸ್ ವ್ಯವಸ್ಥೆಗೆ ಹಲಕರ್ಟಿ ಗ್ರಾಮಸ್ಥರು, ವಿದ್ಯಾರ್ಥಿಗಳ ಒತ್ತಾಯ - ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ

ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ವಿದ್ಯಾರ್ಥಿಗಳು ಸಾರಿಗೆ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ
ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ
author img

By

Published : Mar 12, 2021, 12:15 PM IST

ಕಲಬುರಗಿ: ಸಾರಿಗೆ ಇಲಾಖೆ ನಿರ್ಲಕ್ಷ್ಯದಿಂದಾಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ವಿದ್ಯಾರ್ಥಿಗಳು ದಿನನಿತ್ಯ 4 ಕಿಮೀ ದೂರ ನಡೆದುಕೊಂಡು ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ.

ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ

ಹಲಕರ್ಟಿ ಗ್ರಾಮದಿಂದ ಬಲರಾಮ್ ಚೌಕ್ ಹಾಗೂ ಪಟ್ಟಣದ ವಿವಿಧ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಸುಮಾರು 100ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿದಿನ ತೆರಳುತ್ತಾರೆ. ಆದರೆ, ಈ ಮಾರ್ಗವಾಗಿ ಸಂಚರಿಸುವ ಕೆಲ ಬಸ್‌ಗಳು ಸಮಯಕ್ಕೆ ಸರಿಯಾಗಿ ಬಾರದ ಹಿನ್ನೆಲೆ ಹಾಗೂ ಸರಿಯಾಗಿ ಬಸ್​ ನಿಲ್ಲಿಸದ ಕಾರಣ ವಿದ್ಯಾರ್ಥಿಗಳು ಕಾಲ್ನಡಿಗೆ ಮೂಲಕವೇ ಶಾಲೆಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.

ಈ ಕುರಿತು ಅಸಮಾಧಾನ ಹೊರಹಾಕಿರುವ ವಿದ್ಯಾರ್ಥಿಗಳು, ಬೆಳಗ್ಗೆ 8 ಗಂಟೆಯಿಂದ ಯಾದಗಿರಿ-ಕಲಬುರಗಿ ಹಾಗೂ ರಾಯಚೂರು-ಕಲಬುರಗಿಗೆ ನಾಲ್ಕೈದು ಬಸ್ ಸಂಚರಿಸುತ್ತಿದ್ದು, ನಿರ್ವಾಹಕರು ನಮ್ಮನ್ನು ಬಸ್​ನಲ್ಲಿ ಹತ್ತಿಸಿಕೊಳ್ಳುತ್ತಿಲ್ಲ. ಹೀಗಾಗಿ ಪಾಸ್ ಇದ್ರೂ ಕೂಡ ಯಾವುದೇ ಪ್ರಯೋಜನವಿಲ್ಲ. ಸಮಯಕ್ಕೆ ಸರಿಯಾಗಿ ಬಸ್ ಸಿಗದ ಹಿನ್ನೆಲೆ ಸಕಾಲಕ್ಕೆ ಶಾಲೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ:

ಇನ್ನು ಪ್ರತಿನಿತ್ಯ ಶಾಲೆಗೆ ನಡೆದುಕೊಂಡು ಹೋಗಲು ಸಾಧ್ಯವಿಲ್ಲ. ಬಸ್ ಇಲ್ಲದ ಕಾರಣ ಸರಿಯಾದ ಸಮಯಕ್ಕೆ ತರಗತಿಗೆ ಹಾಜರಾಗಲಾಗುತ್ತಿಲ್ಲ. ಆದ್ದರಿಂದ ಸಾರಿಗೆ ಇಲಾಖೆ ಕೂಡಲೇ ಗಮನ ಹರಿಸಿ ಹಲಕರ್ಟಿ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.