ಕಲಬುರಗಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ದೇಗಲಮಡಿ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ ಜಗನ್ನಾಥ ಬಸವಂತಪುರ (50) ಎಂದು ಗುರುತಿಸಲಾಗಿದೆ. ನಿರಂತರ ಜ್ಯೋತಿ ವಿದ್ಯುತ್ ಲೈನ್ ಎಳೆಯುವಾಗ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿದೆ. ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಗನ್ನಾಥ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.