ಕಲಬುರಗಿ: ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಆಟೋಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಾಲಕ ಸೇರಿ ಇಬ್ಬರು ದುರ್ಮರಣಕ್ಕೀಡಾಗಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಅಳ್ಳೊಳ್ಳಿ ಗೇಟ್ ಬಳಿ ನಡೆದಿದೆ.
ಬಸವರಾಜ(40) ಹಾಗೂ ಸಿದ್ಧಾರ್ಥ (16) ಎಂಬುವರು ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಅಳ್ಳೊಳ್ಳಿ ಗ್ರಾಮದಿಂದ ಸೇಡಂಗೆ ಪ್ರಾಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಆಟೋಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.