ಕಲಬುರಗಿ: ಕ್ರೂಸರ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತೆಲಂಗಾಣ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ ನಡೆದಿದೆ.
ತೆಲಂಗಾಣದ ಹನುಮಕೊಂಡಾ ನಗರದ ಉಜಲಿಬೇಸ ನಿವಾಸಿ ಮಹಮ್ಮದ್ ಅಬ್ದುಲ್ ಮಜೀದ ಸಿದ್ಧಿಖಿ (71) ಹಾಗೂ ಹೈದರಾಬಾದ್ನ ಬಾಲಾಜಿ ನಗರದ ಸಾದಯಾ ಖುನ್ನಿಸಾ ಬೇಗಂ (55) ಮೃತರು. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಕಲಬುರಗಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕ್ರೂಸರ್ನಲ್ಲಿ ಪ್ರಯಾಣಿಸುತ್ತಿದ್ದವರಿಗೂ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಶಸ್ತ್ರಸಜ್ಜಿತ ಎಲ್ಇಟಿ ಉಗ್ರರ ಹಿಡಿದು ಸೇನೆಗೆ ಒಪ್ಪಿಸಿದ ಜನರು; ₹2 ಲಕ್ಷ ಬಹುಮಾನ ಘೋಷಣೆ