ಕಲಬುರಗಿ: ಹೈದರಾಬಾದ್ ಪಶುವೈದ್ಯ ಅತ್ಯಾಚಾರಿಗಳ ಎನ್ ಕೌಂಟರ್ ರೂವಾರಿ ವಿಶ್ವನಾಥ ಸಜ್ಜನರ್ ಅವರ ಫೋಟೊಗೆ ನಗರದಲ್ಲಿ ಹಾಲಿನ ಅಭಿಷೇಕ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಲಾಯಿತು.
ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಎಸ್.ವಿ.ಪಿ ವೃತ್ತದಲ್ಲಿ ವಿಶ್ವನಾಥ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಜಯಘೋಷ ಕೊಗುವ ಮೂಲಕ ಸಿಹಿ ಹಂಚಿ ಸಂಭ್ರಮಿಸಿದರು.
ಅತ್ಯಾಚಾರಿಗಳ ಹೆಡೆಮುರಿಕಟ್ಟಿದ ಕರ್ನಾಟಕದ ಹೆಮ್ಮೆಯ ಪುತ್ರ ವಿಶ್ವನಾಥ್ ಅವರು ಅತ್ಯುತ್ತಮ ಪೊಲೀಸ್ ಅಧಿಕಾರಿಯಾಗಿ ಹೊರಹೊಮ್ಮಿದ್ದಾರೆ. ಆದ್ದರಿಂದ ರಾಷ್ಟ್ರಪತಿಗಳು ಸಜ್ಜನರ್ ಅವರ ಕಾರ್ಯ ಮೆಚ್ಚಿ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಒತ್ತಾಯಿಸಿದರು.