ಕಲಬುರಗಿ: ಕುಡಿಯುವುದಕ್ಕೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮಹಿಳೆಯ ಕತ್ತಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಗರದ ನೂರಾನಿ ಮೊಹಲ್ಲದಲ್ಲಿ ನಡೆದಿದೆ. ಶಾಹನಾ ಬೇಗಂ (36) ಕೊಲೆಯಾದ ಮಹಿಳೆಯಾಗಿದ್ದು, ಪಕ್ಕದ ಮನೆಯಲ್ಲಿ ವಾಸವಿದ್ದ ವಸೀಂ ಅಕ್ರಂ ಎಂಬಾತ ಕುಡಿಯುವುದಕ್ಕೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮಹಿಳೆಯ ಕತ್ತಿಗೆ ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈ ಕುರಿತು ರೋಜಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೋಲಿಸರು ಬಲೆ ಬಿಸಿದ್ದಾರೆ.
ಡಿಸಿಪಿ ಪ್ರತಿಕ್ರಿಯೆ: ಈ ಕುರಿತು ಪ್ರತಿಕ್ರಿಯೆ ನೀಡಿದ ಡಿಸಿಪಿ ಅಡ್ಡೂರು ಶ್ರೀನಿವಾಸುಲು ಅವರು, ಮಹಿಳೆಯ ಹತ್ಯೆ ಪ್ರಕರಣ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ. ಆರೋಪಿ ವಸೀಂ ಅಕ್ರಮ್ ಶಾಹನಾಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಪತಿ ಸೌದಿ ಅರೇಬಿಯಾದಲ್ಲಿ ಇದ್ದ ಕಾರಣ, ಇತ್ತ ವಸೀಂ ಶಹನಾಳ ಮನೆಯಲ್ಲಿ ಇರೋದು ಹೋಗಿ ಬರೋದು ಮಾಡುತ್ತಿದ್ದ. ಹಿಗಾಗಿ ಕಳೆದ ರಾತ್ರಿ ಕುಡಿಯುವುದಕ್ಕೆ ಹಣ ಕೊಡಲಿಲ್ಲ ಅಂತಾ ಶಾಹನಾಳ ಕುತ್ತಿಗೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ ಎಂದು ಹೇಳಿದ್ದಾರೆ.